7:55 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಂಜನಗೂಡು: ವಾಲ್ಮೀಕಿ ಜಯಂತಿ ಆಚರಣೆ; ಕುದುರೆ ಸಾರೋಟು ಮಾದರಿಯ ವಾಹನದಲ್ಲಿ ಮಹರ್ಷಿ ಭಾವಚಿತ್ರವಿರಿಸಿ ಮೆರವಣಿಗೆ

26/11/2023, 13:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಾಲ್ಮೀಕಿ ನಾಯಕರ ಯುವಕರ ಸಂಘ ಹಾಗೂ ಚಿಕ್ಕರಂಗನಾಯಕ ಅಭಿಮಾನಿ ಬಳಗದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.


ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಮಾತನಾಡಿ
ಮಹರ್ಷಿ ವಾಲ್ಮೀಕಿ, ಕನಕದಾಸರು, ಬುದ್ಧ ಬಸವ ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತರಾದವರಲ್ಲ. ಅವರು ಎಲ್ಲ ಸಮಾಜಕ್ಕೂ ಎಲ್ಲ ವರ್ಗದವರಿಗೂ ಅನುಕೂಲವಾಗುವಂತಹ ಕಾರ್ಯಗಳನ್ನು ಮಾಡಿದ್ದಾರೆ. ಹಾಗಾಗಿ ಅವರನ್ನು ಇಂದಿನ ಪೀಳಿಗೆ ನೆನೆಯುತ್ತಾರೆ ಎಂದು ಮಹರ್ಷಿಗಳ ಬಗ್ಗೆ ಹಾಗೂ ಅವರು ಬರೆದ ರಾಮಾಯಣ ಕಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭ ಅದೇ ಗ್ರಾಮದ ಸಾಹಿತಿಗಳಿಬ್ಬರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಕಾರ್ಯಕ್ರಮಕ್ಕೆ ಬಂದ ಮಾಜಿ ಶಾಸಕರು ಹಾಗೂ ವೇದಿಕೆ ಮೇಲಿನ ಗಣ್ಯರನ್ನು ಸಹ ಸನ್ಮಾನಿಸಲಾಯಿತು. ನಂತರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕುದುರೆ ಸಾರೋಟಿನ ಮಾದರಿಯಲ್ಲಿರುವ ವಾಹನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನಿರಿಸಿ ಮೆರವಣಿಗೆ ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಮಹೇಶ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಹೆಮ್ಮೆರಗಾಲ ಸೋಮಣ್ಣ, ಮುಖಂಡರಾದ ಸಂತೋಷ್, ಮಸಗೆ ರಾಜು, ಗೋವಿಂದರಾಜ್, ಪರಶಿವಮೂರ್ತಿ ಶಿವಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು