1:47 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು: ಫೆಬ್ರವರಿ 8ರಂದು ಗ್ರಾಮ ಪಂಚಾಯಿತಿ ಸದಸ್ಯರುಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

05/02/2024, 18:21

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಗ್ರಾಮ ಪಂಚಾಯಿತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸುವಂತೆ ಹಾಗೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 8 ರಂದು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟಗಳ ವತಿಯಿಂದ ಬೆಂಗಳೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡು ಫ್ರೀಡಂ ಪಾರ್ಕ್ ನಲ್ಲಿ ಬೇಡಿಕೆಗಳು ಈಡೇರುವವರೆಗೂ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಗ್ರಾಮ ಪಂಚಾಯಿತಿ ಸದಸ್ಯರುಗಳ ಒಕ್ಕೂಟದ ಅಧ್ಯಕ್ಷ ಗಿರೀಶ್ ತೊರೆಮಾವು ತಿಳಿಸಿದರು
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.


ಗ್ರಾಮ ಪಂಚಾಯತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಬೇಕು ಎಂಬ ಸಂವಿಧಾನದ ಆಶಯ ಹಾಗೂ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ಕನಸಾಗಿಯೇ ಉಳಿದಿದೆ ಇದಕ್ಕೆ ಸರ್ಕಾರಗಳ ಮಲತಾಯಿ ಧೋರಣೆಯೇ ಕಾರಣ ಎಂದರು.
ಆಳುವ ಸರ್ಕಾರಗಳು ಗ್ರಾಮ ಪಂಚಾಯಿತಿಯ ಅಧಿಕಾರವನ್ನು ಮೊಟಕುಗೊಳಿಸಿ ತಮ್ಮ ಕಪಿಮುಷ್ಠಿಯಲ್ಲಿ ಆಡಳಿತ ನಡೆಸುತ್ತಿವೆ. ಇದರ ವಿರುದ್ಧ ಈಗಾಗಲೇ ಹಲವಾರು ಬಾರಿ ಪ್ರತಿಭಟನೆಗಳನ್ನು ನಡೆಸಿದ್ದೇವೆ ಇದರ ಫಲವಾಗಿ ಕೆಲವೇ ಕೆಲವು ಬೆರಳೆಣಿಕೆ ಯಷ್ಟು ಮಾತ್ರ ಬೇಡಿಕೆಗಳು ಈಡೇರಿವೆ. ಗ್ರಾಮಗಳಿಂದಲೇ ದೇಶದ ಉದ್ದಾರ ಎಂದು ಹೇಳುವ ಸರ್ಕಾರಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಮಾಸಿಕ ಗೌರವದನ ಹೆಚ್ಚಳ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಬಸ್ ಪಾಸ್ ಸೇರಿದಂತೆ ಗ್ರಾಮ ಪಂಚಾಯಿತಿಗೆ ಹೆಚ್ಚಿನ ಅಧಿಕಾರ ಹಾಗೂ ಜವಾಬ್ದಾರಿಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಫೆಬ್ರವರಿ 8ರಂದು ಹಮ್ಮಿಕೊಂಡಿರುವ ಬೆಂಗಳೂರು ಚಲೋ ಮತ್ತು ಧರಣಿ ಸತ್ಯಾಗ್ರಹಕ್ಕೆ ಈ ಭಾಗದ ಹೆಚ್ಚಿನ ಗ್ರಾಮ ಪಂಚಾಯತ್ ಸದಸ್ಯರು ಭಾಗವಹಿಸುವಂತೆ ಇದೇ ಸಂದರ್ಭ ಮನವಿ ಮಾಡಿಕೊಂಡರು.
ಒಕ್ಕೂಟದ ಪದಾಧಿಕಾರಿಗಳಾದ ಗಿರೀಶ್ ಹಳೆಪುರ, ಅವಿನಾಶ್ ದೇವನೂರು, ಮಹದೇವ ನಾಯಕ ಸರಗೂರು, ಪರಶಿವಮೂರ್ತಿ ಹಂಡುವಿನಹಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು