6:45 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಂಜನಗೂಡು: ಸಂಭ್ರಮದಿಂದ ಸಂಪನ್ನಗೊಂಡ ಶ್ರೀಕಾರ್ಯ ಸಿದ್ದೇಶ್ವರ ಸ್ವಾಮಿ ರಥೋತ್ಸವ

04/11/2024, 11:18

*ರಥೋತ್ಸವದ ಖುರ್ಜನ್ನು ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತ್ಯೋಯ್ದ ಭಕ್ತರು*
.
ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರ್ಯ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿ ವ್ಯಾಪ್ತಿಯ ಕಾರ್ಯ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಸುಮಾರು ಮೂರು ದಿನಗಳ ಕಾಲ ನಡೆಸಲಾಗುತ್ತದೆ. ಮುಂಜಾನೆ ಅರ್ಚಕರು ಕಾಲ್ನಡಿಗೆಯಲ್ಲಿ ನಡೆದುಕೊಂಡು ಹೋಗಿ ಸುತ್ತೂರಿನ ಕಪಿಲಾ ನದಿಯಲ್ಲಿ ನೀರನ್ನು ತಂದು ಶ್ರೀ ಸಿದ್ದೇಶ್ವರ ಸ್ವಾಮಿಯ ವಿಗ್ರಹಕ್ಕೆ ಅಭಿಷೇಕ ಮಾಡಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ. ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವಕ್ಕೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ವಾಟಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ವಿದ್ಯುಕ್ತವಾಗಿ ಚಾಲನೆ ನೀಡಿದರು.


ನಂತರ ಬಣ್ಣ,ಬಣ್ಣದ ಬಾವುಟ ಹಾಗೂ ಹೂವುಗಳಿಂದ ಶೃಂಗರಿಸಲಾಗಿದ್ದ ಐತಿಹಾಸಿಕ ಖುರ್ಜು ರಥವನ್ನು ಗ್ರಾಮಸ್ಥರು ಊರಿನ ಹೊರವಲಯದ ತನಕ ಎಳೆದರು. ನಂತರ ಗ್ರಾಮಸ್ಥರು ಮತ್ತು ಭಕ್ತರು ತಮ್ಮ ಹೆಗಲ ಮೇಲೆ ಖುರ್ಜು ರಥವನ್ನು ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟಕ್ಕೆ ಹೊತ್ತುಕೊಂಡು ತೆರಳಿದರು ರಥೋತ್ಸವಕ್ಕೆ ಭಕ್ತರು ಹಣ್ಣು ಜವನ ಎಸೆದು ಪುನೀತರಾದರು. ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ದ ದೃಶ್ಯ ಕಂಡು ಮೈ ರೋಮಾಂಚನಗೊಂಡಿತು. ಉಘೇ ಉಘೇ ಸಿದ್ದೇಶ್ವರ ಎಂದು ಭಕ್ತರು ಘೋಷಣೆ ಕೂಗುತ್ತ ಸಾಗಿದರು. ಲಕ್ಷಾಂತರ ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಂಡರು. ಹರಕೆ ಹೊತ್ತ ಭಕ್ತರು ಮಜ್ಜಿಗೆ ಪಾನಕ ಸೇರಿದಂತೆ ತಂಪು ಪಾನೀಯವನ್ನು ವಿತರಿಸಿದರು. ವಿವಿದೆಡೆಯಿಂದ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು ‌.

ಇತ್ತೀಚಿನ ಸುದ್ದಿ

ಜಾಹೀರಾತು