4:22 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರದ್ಧಾಭಕ್ತಿಯಿಂದ ನಡೆದ ಸುತ್ತೂರು ಜಾತ್ರಾ ರಥೋತ್ಸವ; 40 ಜಾನಪದ ತಂಡಗಳ ಮೆರುಗು

28/01/2025, 21:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ 6 ದಿನಗಳ ಕಾಲ ನಡೆಯುತ್ತಿರುವ ಅದ್ದೂರಿ ಜಾತ್ರಾ ಮಹೋತ್ಸವದ 3ನೇ ದಿನವಾದ ಇಂದು ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ರಥೋತ್ಸವ ಸಡಗರ- ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹಾಗೂ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಗದ್ದುಗೆಯಿಂದ ತಂದ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಅಲಂಕೃತ ಉತ್ಸವ ಮೂರ್ತಿಯನ್ನು ಬಣ್ಣ ಬಣ್ಣದ ಬಾವುಟ, ಬಂಟಿಂಗ್ಸ್, ಹೂ ಗಳಿಂದ ಅಲಂಕರಿಸಲಾದ ಬೃಹತ್ ರಥದಲ್ಲಿ ಕೂರಿಸಲಾಯಿತು.
ನಂತರ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವಿವಿಧ ಮಠಾಧೀಶರು ಹಾಗೂ ಗಣ್ಯರು ರಥಕ್ಕೆ ಪೂಜೆ ಸಲ್ಲಿಸಿ ಹಣ್ಣು ಜವನ ಎಸೆದು ಪುಷ್ಪಾರ್ಚನೆ ಮಾಡುವ ಮೂಲಕ ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.


ನಂದಿಧ್ವಜ, ವೀರಗಾಸೆ, ಮಂಗಳವಾದ್ಯ, ಮಹಿಳೆಯರ ಚಂಡೆ ವಾದ್ಯ, ಪೂಜಾ ಕುಣಿತ, ಡೊಳ್ಳು ಕುಣಿತ, ತಮಟೆ ವಾದ್ಯ, ಗಾರುಡಿ ಗೊಂಬೆ, ಹುಲಿ ವೇಷ ಗೊರವರ ಕುಣಿತ ಸೇರಿದಂತೆ 40ಕ್ಕೂ ಹೆಚ್ಚು ವಿವಿಧ ಜಾನಪದ ಕಲಾತಂಡಗಳು ರಥೋತ್ಸವದಲ್ಲಿ ಪಾಲ್ಗೊಂಡು ಜಾತ್ರೆಗೆ ಮೆರುಗು ತಂದವು.
ರಾಜ್ಯದ ನಾನಾ ಮೂಲೆಗಳಿಂದ ಲಕ್ಷಾಂತರ ಭಕ್ತರು ಜಾತ್ರೆ ಹಾಗೂ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀ ಅವರ ರಥಕ್ಕೆ ಹಣ್ಣು ಜವನ ಎಸೆಯುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಜಾತ್ರೆಗೆ ಬಂದ ಲಕ್ಷಾಂತರ ಭಕ್ತರಿಗೆ ಮಹಾದಾಸೋಹದ ವ್ಯವಸ್ಥೆ ಕಲ್ಪಿಸಿ ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಕೌಂಟರ್ ಗಳನ್ನು ನಿರ್ಮಿಸಿ ಭರ್ಜರಿ ಸಿಹಿ ಊಟ ನೀಡಲಾಯಿತು.
ಹತ್ತೂರ ಜಾತ್ರೆಗೆ ಸುತ್ತೂರು ಜಾತ್ರೆ ಸಮ ಎಂಬ ನಾಣ್ಣುಡಿಯಂತೆ ಸುತ್ತೂರು ಜಾತ್ರೆಗೆ ಭಕ್ತರ ಮಹಾಪೂರವೇ ಹರಿದು ಬಂದು ಎಲ್ಲಿ ನೋಡಿದರಲ್ಲಿ ಜನಸಾಗರವೇ ಎದ್ದು ಕಾಣುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು