ಇತ್ತೀಚಿನ ಸುದ್ದಿ
ನಂಜನಗೂಡು ತಾಲೂಕು ಮಡಿವಾಳರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ
04/01/2025, 15:36
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲೂಕು ಮಡಿವಾಳರ ಸಂಘದ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿರುವ ಮಡಿವಾಳದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಯಾಲೆಂಡರ್ ಬಿಡುಗಡೆ
ಕಾರ್ಯಕ್ರಮಕ್ಕೆ ಮುನ್ನ ಮಡಿವಾಳ ಶ್ರೀ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಇದೇ ಸಂದರ್ಭ ಸಮಾಜದ ಮುಖಂಡರು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ನಗರಸಭಾ ಅಧ್ಯಕ್ಷರಲ್ಲಿ ಅರ್ಧಂಬರ್ಧ ಗೊಂಡಿರುವ ಸಮುದಾಯ ಭವನದ ಕಾಮಗಾರಿಗೆ ಅನುದಾನ ಕೊಡಿಸುವಂತೆ ಮನವಿ ಮಾಡಿಕೊಂಡರು.
ಬಳಿಕ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಸೇರಿದಂತೆ ಮತ್ತಿತರ ಗಣ್ಯರು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ಮಾತನಾಡಿ,
ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಮಡಿವಾಳ ಸಮಾಜದವರು ಹಲವಾರು ವರ್ಷಗಳಿಂದ ಈ ಕ್ಯಾಲೆಂಡರ್ ಬಿಡುಗಡೆ ಮಾಡಿಕೊಂಡು ಬರುತ್ತಿದ್ದಾರೆ ಎಂದು ಸಂಘದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇನ್ನು ಸಮಾಜದ ಮುಖಂಡರ ಕೋರಿಕೆಯಂತೆ ಮಡಿವಾಳ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸಲು ಶಾಸಕ ದರ್ಶನ್ ದ್ರುವನಾರಾಯಣ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಅನುದಾನ ಕೊಡಿಸುವುದರ ಜೊತೆಗೆ ನಗರಸಭೆಯಿಂದಲೂ ಅನುದಾನ ಕೊಡಿಸುವ ಭರವಸೆ ನೀಡಿದರು.
ಇದೇ ಸಂದರ್ಭ ಸಂಘದ ವತಿಯಿಂದ ವೇದಿಕೆ ಮೇಲಿನ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಎಚ್. ಡಿ. ಪ್ರಸನ್ನ ಕುಮಾರ್, ಗೌರವಾಧ್ಯಕ್ಷ ಶಿವಣ್ಣ,ಪ್ರಧಾನ ಕಾರ್ಯದರ್ಶಿ, ಕೂಡ್ಲಾಪುರ ಬಸವರಾಜು, ಉಪಾಧ್ಯಕ್ಷರುಗಳಾದ ರವಿ, ಮಹೇಶ್, ಖಜಾಂಚಿ ಸೋಮಣ್ಣ, ಮಹದೇವ್ ಸೇರಿದಂತೆ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.