6:30 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ನಂಜನಗೂಡು | ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಾಡಿ ಗರ್ಭಿಣಿಯರಿಗೆ ಸೀಮಂತ ಸಮಾರಂಭ

07/02/2026, 20:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕ್ಯಾಚಿಂಗ್ ಹಾರ್ಟ್ಸ್ ಫೌಂಡೇಷನ್ ಬೆಂಗಳೂರು, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್, ಸರಗೂರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ,ಪ್ರಾಥಮಿಕ ಆರೋಗ್ಯ ಕೇಂದ್ರ ಅಣ್ಣೂರು ಇವರ ಸಹಯೋಗದಲ್ಲಿ,ಹಾಡಿ ಗರ್ಭಿಣಿಯರಿಗೆ ಸೀಮಂತ ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು.


ಕಾರ್ಯ ಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್ ಟಿ. ಅವರು ಅಧ್ಯಕ್ಷತೆಯನ್ನು ವಹಿಸಿ,ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಬೆಂಗಳೂರು ಪೂರ್ವ, ಕೆ ಆರ್. ಪುರ ದ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಕ್ಯಾಪ್ಟನ್ ಡಾ. ರಘುನಾಥ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ರಾಹುಲ್ ಮುತ್ತುಸ್ವಾಮಿ ವಿವೇಕಾನಂದ ಮೂಮೆಂಟ್ ಸಂಸ್ಥೆಯ ವ್ಯವಸ್ಥಾಪಕರಾದ ವೆಂಕಟಸ್ವಾಮಿ. ಉಪಸ್ಥಿತರಿದ್ದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ ರವಿಕುಮಾರ್ ಅವರು ಮಾತನಾಡಿ, ಈ ದಿನ ಅಣ್ಣೂರ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಕಾಡು ಪ್ರದೇಶ ದಲ್ಲಿ ವಾಸ ಮಾಡುವ ಹಾಡಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಸುತ್ತಿರುವುದು ತುಂಬಾ ಸಂತೋಷಕರವಾದ ವಿಷಯ. ಇದಕ್ಕೆ ಸಹಕರಿಸಿದ ಕ್ಯಾಚಿಂಗ್ ಆರ್ಟ್ಸ್ ಸಂಸ್ಥೆ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು,
ಗರ್ಭಿಣಿಯ ಆರೋಗ್ಯ ಮತ್ತು ಸಂತೋಷಕ್ಕಾಗಿ 7ನೇ ಅಥವಾ 8ನೇ ತಿಂಗಳಲ್ಲಿ ಆಚರಿಸುವ ಸೀಮಂತ ಹಿಂದೂ ಸಂಪ್ರದಾಯವಾಗಿದೆ. ಇದು ಭ್ರೂಣದ ಬೆಳವಣಿಗೆಯ ಹಂತದಲ್ಲಿ ಆಕೆಗೆ ಧೈರ್ಯ ತುಂಬಲು, ಹಿರಿಯರ ಆಶೀರ್ವಾದ ಪಡೆಯಲು, ಮತ್ತು ಹೂವು-ಸೀರೆ ನೀಡಿ, ಸಿಹಿ ತಿಂಡಿಗಳನ್ನು ಬಡಿಸಿ ಆಕೆಯನ್ನು ಸಂಭ್ರಮಿಸುವ ಕಾರ್ಯಕ್ರಮವಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿ ಹಾಡಿ ಗರ್ಭಿಣಿ ಸ್ತ್ರೀಯರು ಇದರ ಸದುಪಯೋಗಪಡಿಸಿಕೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವಂತೆ ಸಲಹೆ ಸೂಚನೆ ನೀಡಿದರು.
ಕಾರ್ಯ ಕ್ರಮದಲ್ಲಿ ,ಕ್ಯಾಚಿಂಗ್ ಆರ್ಟ್ಸ್ ಸಂಸ್ಥೆಯ ಶುಶ್ರೂಷಕಾಧಿಕಾರಿ ಸೌಮ್ಯ,VMH ಸಂಯೋಜಕರಾದ ರಾಜೇಶ್, ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿಯ ಸಿಬ್ಬಂದಿ ವರ್ಗದವರಾದ ಶರಣಪ್ಪ, ಅಶೀಮಾ ಸುಲ್ತಾನ್,ರವಿರಾಜ್,ಅರ್ಚನಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದರಾದ. ದಿವ್ಯಾ ,ಸುಜಾತ, ಅಶ್ವಿನಿ, ವೀರೇಶ್, ಕೃಷ್ಣ ಲೋಕೇಶ್, ಪರಶಿವ ,ನೇತ್ರ . ಆಶಾ ಕಾರ್ಯಕರ್ತೆಯರು ಹಾಗು ಗರ್ಭಿಣಿಯರು, ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು