11:45 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ನಂಜನಗೂಡು: ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟದ ವತಿಯಿಂದ ತಾಲೂಕು ಘಟಕದ ರಚನೆ

08/05/2026, 20:19

ಮೋಹನ್ ನಂಜನಗೂಡು

info.reporterkarnataka@gmail.com

ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟದ ವತಿಯಿಂದ ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ನಂಜನಗೂಡು ತಾಲೂಕಿನ ನೂತನ ಘಟಕ ರಚನೆ ಮಾಡಿ ನೂತನ ಘಟಕದ ಅಧ್ಯಕ್ಷರನ್ನಾಗಿ ಕಳಲೆ ಶಿವಕುಮಾರ್ ಎಂಬುವರನ್ನು ಅವಿರೋಧ ಆಯ್ಕೆ ಮಾಡಲಾಯಿತು.
ರಾಜ್ಯ ಸಮಿತಿ ಗೌರವಾಧ್ಯಕ್ಷ ನಾಗೇಶ್, ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಗೀತಾ ಸೇರಿದಂತೆ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಅಹಿಂದ ಮುಖಂಡರ ಸಭೆ ನಡೆಸಿ ಚರ್ಚಿಸಿ ಒಮ್ಮತದಿಂದ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ನಂತರ ರಾಜ್ಯ ಅಹಿಂದ ಒಕ್ಕೂಟದ ಗೌರವಾಧ್ಯಕ್ಷ ನಾಗೇಶ್ ಮಾತನಾಡಿ ಅಹಿಂದ ವರ್ಗಗಳ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿ ಅವರನ್ನು ಸಾಮಾಜಿಕ ಹಾಗು ಆರ್ಥಿಕವಾಗಿ ಮುಂದೆ ತರುವ ಉದ್ದೇಶದಿಂದ ಈ ಸಂಘಟನೆಯನ್ನು ಕಟ್ಟಲಾಗಿದೆ. ರಾಜ್ಯಮಟ್ಟದಲ್ಲಿ ಪ್ರವಾಸ ಮಾಡಿ ಎಲ್ಲಾ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂಘಟನೆ ಮಾಡುವ ಮೂಲಕ ಜಿಲ್ಲಾ ಮತ್ತು ತಾಲೂಕು ಸಂಘಗಳನ್ನು ರಚನೆ ಮಾಡಿ ಆ ಮುಖಾಂತರ ಗ್ರಾಮೀಣ ಭಾಗದ ಶೋಷಿತ ವರ್ಗದ ಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸಲಾಗುವುದು. ಹಾಗಾಗಿ ಈಗ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ಮತ್ತು ತಾಲೂಕುಗಳಿಗೆ ತೆರಳಿ ನೂತನ ಜಿಲ್ಲಾ ಮತ್ತು ತಾಲೂಕು ಘಟಕಗಳನ್ನು ರಚನೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಹಿಂದ ಪರ ಇರುವ ಮಾನ್ಯ ಮುಖ್ಯಮಂತ್ರಿಗಳು, ಸಚಿವರಾದ ಸತೀಶ್ ಜಾರಕಿಹೊಳಿ, ಎಚ್. ಸಿ. ಮಹದೇವಪ್ಪ ಸೇರಿದಂತೆ ಯಾರು ನಮ್ಮ ಸಂಘಟನೆಯನ್ನು ಒಪ್ಪಿ, ಅಪ್ಪಿ ಬೆಂಬಲಿಸುತ್ತಾರೋ ಅಂತಹವರನ್ನು ಕರೆಯಿಸಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದರು. ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ ಮಾತನಾಡಿ ಇದು ಯಾರ ಹಾಗೂ ಯಾವ ಪಕ್ಷದ ವಿರುದ್ಧವೂ ಅಲ್ಲ. ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರು ಶೋಷಿತ ಸಮುದಾಯಕ್ಕೆ ಯಾವುದೇ ಸ್ಥಾನಮಾನ ಸಿಕ್ಕಿಲ್ಲ ಹಾಗಾಗಿ ಶೋಷಿತ ಸಮುದಾಯಗಳ ಪರವಾಗಿ ಕೆಲಸ ಮಾಡುವ ಸಂಘಟನೆ ಇದಾಗಿದೆ ಎಂದರು.


ಅಲ್ಲದೆ ಇದು ಯಾವುದೇ ಒಂದು ಪಕ್ಷಕ್ಕೆ, ಜಾತಿ,ಧರ್ಮಕ್ಕೆ ಸೀಮಿತವಾದುದ್ದಲ್ಲ ಎಲ್ಲಾ ಸಮುದಾಯಗಳ ಹಾಗೂ ಧರ್ಮಗಳನ್ನು ಒಳಗೊಂಡoತ್ತೆ ಮಾಡಿಕೊಂಡಿರುವ ಸಂಘಟನೆ ಶೋಷಿತ ಸಮುದಾಯಗಳ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮ ಸಂಘಟನೆಯ ಗುರಿ. ಹಾಗಾಗಿ ನಾವು ರಾಜ್ಯಾದ್ಯಂತ ಪ್ರವಾಸ ಮಾಡಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂಘಟನೆ ಮಾಡುವ ಮೂಲಕ ಗ್ರಾಮೀಣ ಭಾಗಗಳಲ್ಲಿ ಅಹಿಂದ ವರ್ಗಗಳ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವಂತಹ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಅದರಂತೆ ಇಂದು ನಂಜನಗೂಡಿಗೆ ಭೇಟಿ ನೀಡಿ ನೂತನ ಘಟಕ ರಚನೆ ಮಾಡಿ ಆ ಮೂಲಕ ಸಮಾಜದವರಿಗೆ ನ್ಯಾಯ ಹಾಗೂ ಅವರ ಹಕ್ಕುಗಳ ಬಗ್ಗೆ ಹೋರಾಟ ಮಾಡುವುದಾಗಿ ತಿಳಿಸಿದರು.
ರಾಜ್ಯ ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಮಾತನಾಡಿ ಶೋಷಿತ ವರ್ಗದ ಮಹಿಳೆಯರು ಮನೆ ಬಿಟ್ಟು ಹೊರಗೆ ಹೋಗಲಾಗದ ಪರಿಸ್ಥಿತಿ ನಿರ್ಮಾಣವಾಗಿ ಹೀನಾಯ ಪರಿಸ್ಥಿತಿ ಹಾಗೂ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಇದರ ವಿರುದ್ಧ ನಮ್ಮ ಸಂಘಟನೆ ಹೋರಾಟ ಮಾಡಿ ಅವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದರು.
ಇದೇ ಸಂದರ್ಭ ನೂತನ ತಾಲೂಕು ಘಟಕದ ಅಧ್ಯಕ್ಷ ಕಳಲೆ ಶಿವಕುಮಾರ್ ಅವರಿಗೆ ರಾಜ್ಯ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಡಾ. ಪಿ. ಶಾಂತರಾಜ ಅರಸ್ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ನಿರ್ದೇಶಕರುಗಳಾದ ಮುತ್ತುರಾಜು, ಸುರೇಶ್, ಅನಿತಾ ಲಕ್ಷ್ಮಿ, ಮಾಲತಿ,ರವಿಕುಮಾರ್ ಸೇರಿದಂತೆ ತಾಲೂಕು ಮುಖಂಡರುಗಳಾದ ಲಕ್ಷ್ಮಣ ರಾಜು, ರಮೇಶ್, ನಂಜಪ್ಪ, ಮಣಿ, ಸತೀಶ್, ಆನಂದ,ನಿಂಗನಾಯಕ, ಜಬ್ಬರ್ ಪಾಷಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು