11:48 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಕುರಿತು ಪರಿಶೀಲನೆ

20/02/2025, 16:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಪೇಪರ್ ಬಳಸುತ್ತಿರುವ ಕುರಿತು ಹೆಚ್.ಡಿ.ಕೋಟೆ ಪಟ್ಟಣದ ಹೋಟೆಲ್ ಗಳಿಗೆ ಮತ್ತು ಬೀದಿ ಬದಿ ವ್ಯಾಪಾರಿ ಗಳ ಮಳಿಗೆ ಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಗಳಾದ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳು ಮಾತನಾಡಿ
ರಾಜ್ಯಾದ್ಯಂತ‌ ಪ್ಲಾಸ್ಟಿಕ್ ಗಳನ್ನು ನಿಷೇಧ ಮಾಡಲಾಗಿದೆ. ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು, ಪಾರ್ಸೆಲ್ ಕಟ್ಟಿಕೊಡಲು ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ,ಎಲ್ಲ ಹೋಟೆಲ್, ಕ್ಯಾಂಟೀನ್ ಮತ್ತು ಬೀದಿಬದಿ ವ್ಯಾಪಾರಿಗಳು,ಸಾರ್ವಜನಿಕರಿಗೆ ಶುದ್ಧವಾದ ಆಹಾರವನ್ನು ನೀಡಬೇಕು,ಆಹಾರವನ್ನು ತಯಾರಿಸಿದ ನಂತರ ಮುಚ್ಚಿಡಬೇಕು ಹಾಗೂ ಅಡುಗೆ ಮನೆಯನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳಬೇಕು, ಬೇಸಿಗೆ ಕಾಲ ವಾದರಿಂದ ಜನರಿಗೆ ಕುಡಿಯಲು ಕಡ್ಡಾಯವಾಗಿ ಬಿಸಿ. ನೀರನ್ನು ನೀಡಬೇಕು, ಎಂದು ತಿಳಿಸಿದರು.


ನಂತರ ಹೋಟೆಲ್ ಗಳಿಂದ ಆಹಾರ ಪದಾರ್ಥಗಳನ್ನು (ಇಡ್ಲಿ ,ಚಟ್ನಿ, ಸಾಂಬಾರ್) ತೆಗೆದುಕೊಂಡು ಜಿಲ್ಲಾ ಮಟ್ಟದ ಪ್ರಯೋಗಾಲಯಕ್ಕೆ ಪರೀಕ್ಷೆ ಗೆ ಒಳಪಡಿಸಲಾಯಿತು.ಇದೇ ಸಂದರ್ಭದಲ್ಲಿ ಹೋಟೆಲ್ ಮತ್ತು ಕ್ಯಾಂಟೀನ್ ,ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿ ದಂಡ ಸಹ ವಿಧಿಸಲಾಯಿತು.
ಆರೋಗ್ಯ ಇಲಾಖೆ ಹಾಗೂ ಪುರಸಭೆ, ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು