2:22 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ

19/05/2026, 17:58

ಮೋಹನ್ ನಂಜನಗೂಡು

info.reporterkarnataka@gmail.com
ನಂಜನಗೂಡು ತಾಲೂಕು ಕಾಡಂಚಿನ ಪ್ರದೇಶ ಯಡಿಯಾಲ ಗ್ರಾಮದ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆಯಾಗಿದ್ದು ರೈತರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ ಯಡಿಯಾಲದ ಬಳಿ ಚಿಲಕಳ್ಳಿ ಓಣಿ ನಂಜಪ್ಪನ ದೇವಾಲಯದ ಅಕ್ಕ ಪಕ್ಕದ ಪರಶಿವಪ್ಪ, ಚಿನ್ನಸ್ವಾಮಪ್ಪ ಹಾಗೂ ಬಸವರಾಜಪ್ಪ ಅವರ ಜಮೀನುಗಳಲ್ಲಿ ನಿನ್ನೆ ಈ ಹುಲಿ ಹೆಜ್ಜೆ ಪತ್ತೆಯಾಗಿದ್ದು ಇದರಿಂದಾಗಿ ರೈತರು ಜಮೀನಿಗೆ ಬರಲು ಎದುರುತ್ತಿದ್ದು ಕೃಷಿ ಚಟುವಟಿಕೆಗಳು ಕುಂಠಿತಗೊಂಡಿವೆ. ಹೆಜ್ಜೆ ಗುರುತನ್ನು ಪತ್ತೆ ಹಚ್ಚಿ ರೈತರು ಹಾಗೂ ಯಡಿಯಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಶ್ರಫ್ಅಲಿ ಅವರು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಫೋಟೋ ಸಮೇತ ವಿಷಯ ತಿಳಿಸಿದ್ದಾರೆ.ಆದರೂ ವಿಷಯ ತಿಳಿದು ಒಂದು ದಿನ ಕಳೆದರೂ ಯಾವೊಬ್ಬ ಅಧಿಕಾರಿಯಾಗಲಿ ಅಲ್ಲಿಗೆ ಬಂದು ಸ್ಥಳ ಪರಿಶೀಲನೆ ಮಾಡಿ ರೈತರಿಗೆ ಧೈರ್ಯ ತುಂಬುವುದನ್ನು ಬಿಟ್ಟು ನಿರ್ಲಕ್ಷ್ಯ ತನ ತೋರಿದ್ದಾರೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ .ಹೇಳಿ ಕೇಳಿ ಯಡಿಯಾಲ ಅರಣ್ಯದ ಕಾಡಂಚಿನ ಪ್ರದೇಶವಾಗಿದ್ದು ಇಲ್ಲಿ ಹುಲಿ, ಚಿರತೆ, ಆನೆಗಳು ಆಗಿಂದಾಗ್ಗೆ ಜನ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಇವೆ.ಈ ಭಾಗದಲ್ಲಿ ಹಲವಾರು ದಿನಗಳಿಂದ ಹುಲಿ ಇರುವುದು ಅರಣ್ಯ ಅಧಿಕಾರಿಗಳಿಗೂ ಗೊತ್ತು ಆದರೂ ಅಧಿಕಾರಿಗಳು ಮಾತ್ರ ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ.ಮುಂಜಾಗ್ರತಾ ಕ್ರಮ ವಹಿಸಿ ಹುಲಿಯನ್ನು ಸೆರೆ ಹಿಡಿದು ದೂರದ ಕಾಡಿಗೆ ಬಿಡುವುದನ್ನು ಬಿಟ್ಟು ಬೇಜವಾಬ್ದಾರಿಯಿಂದ ಏನಾದರೂ ಅನಾಹುತ ನಡೆದ ಮೇಲೆ ಬಂದು ಪರಿಹಾರ ನೀಡಿ ಕೈ ತೊಳೆದು ಕೊಳ್ಳುತ್ತಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಕೂಡಲೇ ಅಧಿಕಾರಿಗಳು ಇಲ್ಲಿಗೆ ಬಂದು ಹುಲಿಯ ಹೆಜ್ಜೆ ಗುರುತನ್ನು ಪರಿಶೀಲನೆ ನಡೆಸಿ ಹುಲಿ ಹಿಡಿಯುವುದಕ್ಕೆ ಕಾರ್ಯತಂತ್ರ ರೂಪಿಸಬೇಕು ಇಲ್ಲವಾದಲ್ಲಿ ಮುಂದೆ ಏನಾದರೂ ಅನಾಹುತ ನಡೆದರೆ ಅದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳೇ ನೇರ ಹೊಣೆ ಎಂದು ಮುಖಂಡ ಅಶ್ರಫ್ಅಲಿ ಮಾತನಾಡಿ ಈ ಭಾಗದ ಶಾಸಕರು ಮತ್ತು ಸಂಸದರು ಕೂಡ ಇದರ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಹುಲಿ ಹಿಡಿಯುವಂತೆ ಕಟ್ಟು ನಿಟ್ಟಿನ ಆದೇಶ ಮಾಡಿ ಜನರು ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತೆ ಮಾಡಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು