ಇತ್ತೀಚಿನ ಸುದ್ದಿ
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ
09/05/2026, 18:39
ಮೋಹನ್ ನಂಜನಗೂಡು
info.reporterkarnataka@gmail.com
ವೀರ ಮದಕರಿ ನಾಯಕರ ಜಯಂತೋತ್ಸವದ ಅಂಗವಾಗಿ ನಡೆದ ನಂಜನಗೂಡು ತಾಲೂಕು ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ನಂಜನಗೂಡಿನ ತಗಡೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ವಿವಿಧೆಡೆಯಿಂದ ಸುಮಾರು 25 ತಂಡಗಳು ಭಾಗವಹಿಸಿದ್ದವು. ಪಂದ್ಯಾವಳಿಗೆ ತಾಲೂಕು ನಾಯಕರ ಸಂಘದ ಗೌರವಾಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಆದ ಹರತಲೆ ಚಿಕ್ಕರಂಗನಾಯಕ ಅವರು ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.
ಇದಕ್ಕೂ ಮುನ್ನ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್ಲಾ ಕ್ರಿಕೆಟ್ ಪಟುಗಳನ್ನು ಪರಸ್ಪರ ಪರಿಚಯ ಮಾಡಿಕೊಂಡರು.
ನಂತರ ನಡೆದ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳು ತಮ್ಮ ತಮ್ಮ ಗೆಲುವಿಗಾಗಿ ರೋಚಕ ಪ್ರದರ್ಶನ ನೀಡಿದರು. ಅದರಲ್ಲಿ ತಾಲೂಕಿನ ಕವಲಂದೆ ತಂಡವು ಪ್ರಥಮ ಸ್ಥಾನ ಗಳಿಸಿ ರೂ.30,000 ನಗದು ಹಾಗೂ ಟ್ರೋಫಿಯನ್ನು ಪಡೆದರೆ ಎರಡನೇ ಸ್ಥಾನವನ್ನು ತಗಡೂರು ತಂಡವು ಪಡೆದು 15 ಸಾವಿರ ರೂಪಾಯಿ ಬಹುಮಾನ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ನಂತರ ಚಿಕ್ಕರಂಗನಾಯಕ ಮಾತನಾಡಿ ಕ್ರೀಡಾಪಟುಗಳು ಯಾವುದೇ ಆವೇಶಕ್ಕೆ ಒಳಗಾಗದೆ ಸೋಲು ಗೆಲುವನ್ನು ಸಮಾನಾಂತರವಾಗಿ ಸ್ವೀಕರಿಸಬೇಕು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದೇ ಸಂದರ್ಭ ಅವರನ್ನು ಜಯಂತ್ಯೋತ್ಸವ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ಕಾರ್ಯಕ್ರಮದಲ್ಲಿ ಆಯೋಜಕರಾದ ಸಂಪತ್ ಕುಮಾರ್, ಮನು, ರಾಹುಲ್, ಸಿದ್ದನಾಯಕ, ಸೀನಾ ಸೇರಿದಂತೆ ತಗಡೂರು ಮದಕರಿ ವಾರಿಯರ್ಸ್ ತಂಡದ ಎಲ್ಲಾ ಆಟಗಾರರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.












