4:08 AM Tuesday28 - October 2025
ಬ್ರೇಕಿಂಗ್ ನ್ಯೂಸ್
ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ… Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು Kodagu | ಸುಂಟಿಕೊಪ್ಪ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕ ಹೃದಯಘಾತದಿಂದ ದಾರುಣ ಸಾವು ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ…

ಇತ್ತೀಚಿನ ಸುದ್ದಿ

ನಂತೂರು ಜಂಕ್ಷನ್: ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ದಾರುಣ ಸಾವು

30/07/2024, 22:15

ಮಂಗಳೂರು(reporterkarnataka.com):ಎನ್‌ಎಚ್66ರಲ್ಲಿ ಟ್ಯಾಂಕರ್ ವೊಂದು ಸ್ಕೂಟರ್ ಮೇಲೆ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಪದವು-ಜಂಕ್ಷನ್ ನಡುವೆ ಇಂದು ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಎಂದು ಗುರುತಿಸಲಾಗಿದೆ.
ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು ಅವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಲಾರಿಯು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿಯವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಸ್ಥಳದಲ್ಲಿ ಅಂಥಹ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು