8:13 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ನಾಪತ್ತೆಯಾಗಿದ್ದ ಮೂಡುಬೆಳ್ಳೆಯ ಯುವತಿಯ ಶವ ಪಡುಬೆಳ್ಳೆಯ ನದಿಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ

13/10/2023, 16:03

ಕಾರ್ಕಳ(reporterkarnataka.com): ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂಡುಬೆಳ್ಳೆ ಕೊಂಗಿಬೈಲಿನ ಯುವತಿಯೊಬ್ಬಳ ಶವ ಪಾಪನಾಶಿನಿ ನದಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22)
ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದರು.
ಅ. 9ರಂದು ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೋದವರು ವಾಪಸ್ ಬರಲಿಲ್ಲ. ಶಿರ್ವ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಬಿಕಾಂ ಪದವೀಧರೆಯಾಗಿದ್ದ ವಿನಿತಾ ಉಡುಪಿ ಎಂಜಿಎಂ ಕಾಲೇಜು ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂಗೆ ಸುಮಾರು 4 ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದರು. ವಾರದ ಹಿಂದೆ ಕೆಲಸಬಿಟ್ಟಿದ್ದರು.
ವಿನಿತಾ ನಾಪತ್ತೆಯಾದ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮನೆಯವರು ಸಂಬಂಧಿಕರ, ಸ್ನೇಹಿತರ ಮನೆ, ಅಸುಪಾಸಿನಲ್ಲಿ ಹುಡುಕಾಟ ನಡೆಸಿದ್ದರು.
ಇದೀಗ ಮೃತದೇಹ ಮೃತದೇಹ
ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಪಾಪನಾಶಿನಿ ನದಿ ಗುಂಡಿಯಲ್ಲಿ ಪತ್ತೆಯಾಗಿದೆ. ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು