1:55 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ನಾಪೋಕ್ಲು: ಹಲ್ಲೆ ಖಂಡಿಸಿ ರಸ್ತೆ ತಡೆ; ಪೊಲೀಸ್ ಅಧಿಕಾರಿಗಳು ಹಾಗೂ ಪ್ರತಿಭಟನೆಕಾರರ ನಡುವೆ ಮಾತಿನ ಚಿಕಮಕಿ

27/02/2026, 22:39

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಾಪೋಕ್ಲು ಸಮೀಪದ ಬಲ್ಲಮಾವಟಿಯಲ್ಲಿ ನಾಳೆ ನಡೆಯಲಿರುವ ಹಿಂದು ಸಂಗಮ ಹಿನ್ನೆಲೆಯಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುವ ಸಂದರ್ಭ, ಸಿದ್ದೀಕ್ ಹಾಗೂ ಅವರ ಸಂಗಡಿಗರು ಅಪ್ಪಚ್ಚಿರ ಗೌತಮ್ ಎಂಬವರ ಮೇಲೆ ಮರಣಾಂತಿಕ ಹಲ್ಲೆ ನಡೆಸಿದನ್ನು ಖಂಡಿಸಿ ರಸ್ತೆ ತಡೆ ನಡೆಸಲಾಯಿತು.
ಹಲ್ಲೆ ಆರೋಪಿಯನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳಿಂದ ಇಂದು ಸಂಜೆ ನಾಪೋಕ್ಲುವಿನಲ್ಲಿ ರಸ್ತೆ ತಡೆ ನಡೆಸಿದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಹಾಗೂ ಪ್ರತಿಭಟನೆಕಾರರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು.


ನಾಪೋಕ್ಲುವಿನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.
ಸ್ಥಳದಲ್ಲಿ ವಿರಾಜಪೇಟೆ ಡಿವೈಎಸ್ಪಿ, ವಿರಾಜಪೇಟೆ ವೃತ್ತ ನಿರೀಕ್ಷಕರು ಸಿಬ್ಬಂದಿಗಳು, ಮಡಿಕೇರಿ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಜಿಲ್ಲೆಯ ಹಿರಿಯ ಪೋಲಿಸ್‌ ಅಧಿಕಾರಿಗಳು ಪ್ರತಿಭಟನ ಸ್ಥಳಕ್ಕೆ ಆಗಮಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಹಿಂದೂ ಸಂಘಟನೆಯ ಮನು ಮುತ್ತಪ್ಪ ಮತ್ತು ಸಂಗಡಿಗರು ಈ ಘಟನೆಯನ್ನು ಖಂಡಿಸಿ ತಪ್ಪಿತಸ್ಥರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು