ಇತ್ತೀಚಿನ ಸುದ್ದಿ
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ
27/02/2026, 22:36
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ನಾಪೋಕ್ಲುವಿನಲ್ಲಿ ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ ನಡೆದು ಓರ್ವನಿಗೆ ಗಾಯಗೊಂಡಿದ್ದಾನೆ.
ಸಿಧ್ಧಿಕ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಹಲ್ಲೆ ಆರೋಪಿಯನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳಿಂದ ಒತ್ತಾಯಿಸಿ
ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಗಳಿಂದ ರಸ್ತೆ ತಡೆ ನಡೆಯಿತು.
ನಾಪೋಕ್ಲುವಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರ ಒತ್ತಾಯಿಸಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು ಬೂದಿ ಮುಚ್ಚಿದ ವಾತಾವರಣವಿದೆ.









