8:10 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ‘ನಾರದ ಪುರಸ್ಕಾರ’ ಪ್ರಶಸ್ತಿ: ಆ.4ರಂದು ಪ್ರದಾನ

01/08/2026, 15:23

ಮಂಗಳೂರು(reporterkarnataka.com): ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ ಮಹರ್ಷಿ ನಾರದರ ಸಂಸ್ಮರಣೆಯಲ್ಲಿ ನೀಡಲಾಗುವ ‘ನಾರದ ಪುರಸ್ಕಾರ’ ಪ್ರಶಸ್ತಿಗೆ ‘ಹೊಸ ದಿಗಂತ ಪತ್ರಿಕೆ’ಯ ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ.ಪಳ್ಳಿ ಅವರು ಭಾಜನರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಆ. 4 ರಂದು ಸಂಜೆ 4 ಗಂಟೆಗೆ
ಕಾರಣಗಿರಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಸಭಾ ಭವನದಲ್ಲಿ ನಡೆಯಲಿದೆ.
ಕಲಾದರ್ಶನ ಮಾಸಪತ್ರಿಕೆಯ ಪ್ರಧಾನ ಸಂಪಾದಕ ಹಾದಿಗಲ್ಲು ಲಕ್ಷ್ಮೀನಾರಾಯಣ ಅವರು ಅಧ್ಯಕ್ಷತೆ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘ ಸಮಗ್ರ ಕರ್ನಾಟಕ ಪ್ರಾಂತದ ಪ್ರಚಾರ ಪ್ರಮುಖ್ ಅರುಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಗ್ರಾಮ ಭಾರತಿ ಟ್ರಸ್ಟ್ ಅಧ್ಯಕ್ಷ ಹನಿಯ ರವಿ ಮತ್ತಿತರರು ಉಪಸ್ಥಿತರಿರುವರು.
ಒಟ್ಟು ಒಂಭತ್ತು ಮಂದಿ ಪತ್ರಕರ್ತರಿಗೆ ನಾರದ ಪುರಸ್ಕಾರ ಪ್ರದಾನವಾಗಲಿದೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಸುರೇಶ್ ಡಿ. ಪಳ್ಳಿ ಅವರು ಕಳೆದ 19 ವರ್ಷಗಳಿಂದ ಹೊಸ ದಿಗಂತ ಪತ್ರಿಕೆಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ 2013ರಲ್ಲಿ ಅತ್ಯುತ್ತಮ ಗ್ರಾಮೀಣ ವರದಿಗಾಗಿ ಪದ್ಯಾಣ ಗೋಪಾಲಕೃಷ್ಣ ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ (ಪ.ಗೋ ಪ್ರಶಸ್ತಿ), ಸಮಾಜದಲ್ಲಿ ಸೌಹಾರ್ದತೆ ಪ್ರತಿಬಿಂಬಿಸುವ ವಿಶೇಷ ವರದಿಗಾಗಿ 2023ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ‘ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿ ಲಭಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು