3:40 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನರೇಗಾ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ: ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಶ್ರೀನಿವಾಸ ರೆಡ್ಡಿ ಅಮಾನತು

27/01/2024, 14:46

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನರೇಗಾದಲ್ಲಿ ಅವ್ಯವಹಾರ ಆರೋಪ ಸಂಬಂಧ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಎಸ್.ಎಂ. ಶ್ರೀನಿವಾಸರೆಡ್ಡಿ ಹಾಗೂ ತಾಂತ್ರಿಕ ಸಹಾಯ ಸಿಬ್ಬಂದಿನ್ನು ಅಮಾನತುಗೊಳಿಸಲಾಗಿದೆ.
ನರೇಗಾ ಕಾಮಗಾರಿಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಕಾಮಗಾರಿ ನಡೆಸದೆ ಬಿಲ್ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸಂತಪ್ಪ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಕೊತ್ತಹುಡ್ಯ, ಬೈರಗಾನಹಳ್ಳಿ ಗ್ರಾಮದ ಗೋಮಾಳ ಸರ್ವೇ ನಂ 124 ರಲ್ಲಿ ಗೋಕುಂಟೆ ನಿರ್ಮಾಣ ಮಾಡಿದ್ದು, ಈ ಕಾಮಗಾರಿಗಳಲ್ಲಿ ನ್ಯೂನತೆ ಕಂಡಿಬಂದಿದ್ದ ಹಿನ್ನೆಲೆಯಲ್ಲಿ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
ಉಪ ಕಾರ್ಯದರ್ಶಿ ತಂಡ ಕಾಮಗಾರಿ ಪರಿಶೀಲಿಸಿ ಹಾಗೂ ಕಾಮಗಾರಿಗಳ ಬಗ್ಗೆ ದಾಖಲೆ ಪರಿಶೀಲಿಸಿದ ವೇಳೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರಿಂದ ಕಾಮಗಾರಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಯಾವುದೇ ದಾಖಲೆಗಳು ಸಿಕ್ಕಿಲ್ಲ.
ಗೋಕುಂಟೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಅಳತೆ ಪರಿಶೀಲಿಸಿದಾಗ ಅಳತೆಯಲ್ಲಿ ವ್ಯತ್ಯಾಸವಿದ್ದು, ಕೂಲಿಯ ವೆಚ್ಚವನ್ನು ಪಾವತಿ ಮಾಡಿರುವುದು ಕಂಡುಬಂದಿರುತ್ತದೆ.
ಸದರಿ ಕಾಮಗಾರಿಗಳ ಅಂದಾಜು ಪಟ್ಟಿಗೂ, ಕಾಮಗಾರಿ ಅನುಷ್ಠಾನಕ್ಕೂ ಮತ್ತು ಅಳತೆ ಪುಸ್ತಕಕ್ಕೂ ಯಾವುದೇ ರೀತಿಯ ತಾಳೆಯಾಗದಿರುವುದು ಕಂಡು ಬಂದಿದೆ. ಮರಸನಪಲ್ಲಿ ಗ್ರಾಮ ಸತೀಶ್ ಜಮೀನಿನ ಕಾಲುವೆಯ ಕಾಮಗಾರಿಯಲ್ಲಿ ವ್ಯತ್ಯಾಸವಿರುವುದು ಗೊತ್ತಾಗಿದೆ.
ನ್ಯೂನತೆ ಸಂಬಂಧ ಸಮಾಜಾಯಿಷಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ಆದರೂ ಪೂರಕ ದಾಖಲೆ ನೀಡದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು