12:20 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನರಿಕೊಂಬು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

12/12/2023, 00:09

ಬಂಟ್ವಾಳ(reporterkarnataka.com): ವಿದ್ಯೆ ಇದ್ದರೆ ಸಾಲದು ವಿನಯ, ತಾಳ್ಮೆ,ಉತ್ತಮ ಸಂಸ್ಕಾರವಿದ್ದರೆ ಮಾತ್ರ ಒಳ್ಳೆಯ ವ್ಯಕ್ತಿಯಾಗಿರಬಹುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ವತಿಯಿಂದ ನರಿಕೊಂಬು ಮೊಗರ್ನಾಡಿನ
ಅನ್ನಪೂರ್ಣ ಸಭಾಭವನ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ತುಳುನಾಡಿನ ಸಂಸ್ಕೃತಿ ಕಟ್ಟುಪಾಡುಗಳಿಗೆ ತನ್ನದೇ ಆದ ಸ್ಥಾನಮಾನವಿದೆ, ಅದನ್ನು ಯಾರು ಬದಲಾಯಿಸಲು ಹೋಗಬಾರದು. ತುಳು ನಾಡಿನಲ್ಲಿ ಮಾತೆಯರಿಗೆ ಉತ್ತಮ ಸ್ಥಾನ ಹಿರಿಯರ ಕಾಲದಿಂದಲೂ ದೊರೆತಿದೆ. ಅದನ್ನು ಸತ್ಕಾರ್ಯದಲ್ಲಿ ಬಳಸಿ ಉತ್ತಮ ಸಮಾಜ ನಿರ್ಮಾಣ ಮಾಡೋಣ. ಆ ಮೂಲಕ ಮುಂದಿನ ಪೀಳಿಗೆಯೂ ಕೂಡ ಅದನ್ನು ಅನುಸರಿಸುವಂತೆ ಮಾಡೋಣ‌. ಪಾಶ್ಚಾತ್ಯ ಸಂಸ್ಕ್ರತಿಗೆ ಮಾರುಹೋಗದೆ ನಮ್ಮ‌ ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸೋಣ ಎಂದರು.
ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಶಂಬೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಶ್ರೀ ಕ್ಷೇತ್ರದಿಂದ ಗ್ರಾಮದ ಶಾಲೆ, ದೈವಸ್ಥಾನಗಳ ಅಭಿವೃದ್ಧಿಗೆ ಉತ್ತಮ ಮಟ್ಟದ ಅನುದಾನ ಒದಗಿಸಿದ್ದು ಹಾಗೂ ಆಸಕ್ತರಿಗೆ ನೆರವು, ಮಾಶಾಸನ, ಸುಜ್ಞಾನ ನಿಧಿ, ಸುರಕ್ಷಾ ನೀಡುವುದರ ಮೂಲಕ ಗ್ರಾಮದ ಅಭಿವೃದ್ಧಿಯಲ್ಲಿ ಮಹತ್ವ ಪಾತ್ರ ವಹಿಸಿರುವ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಪಂಚಾಯತಿ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಜನಜಾಗೃತಿ ವೇದಿಕೆ ಬಂಟ್ವಾಳದ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಕಾರಂತ್ ನರಿಕೊಂಬು, ಭಜನಾ ಸಂಕೀರ್ತನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೆ ನಮ್ಮ ಸಂಸ್ಕೃತಿಯ ಭಜನಾ ಸಂಕೀರ್ತನ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಮಾಡಿದಂತ ಧಾರ್ಮಿಕ ಕಾರ್ಯಕ್ರಮ ಅರ್ಥಪೂರ್ಣ ವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜನಜಾಗೃತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಯೋಜನಾಧಿಕಾರಿ ಸುಧಾ ಜೋಶಿ, ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ, ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್(ರೀ) ಮಾರುತಿನಗರದ ಅಧ್ಯಕ್ಷ ಚಂದ್ರಹಾಸ್ ಕೋಡಿಮಜಲು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ಅಧ್ಯಕ್ಷ ಲಿಡಿಯ ಪಿಂಟೋ, ನರಿ ಕೊಂಬು ಎ, ಬಿ ಒಕ್ಕೂಟಗಳ ಅಧ್ಯಕ್ಷರುಗಳಾದ ಕೃಷ್ಣಪ್ಪ ಸಪಲ್ಯ, ಜಯಂತ, ಮೊದಲಾದವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಭಜನಾ ಶಿಕ್ಷಕ ಗಣೇಶ್ ನೇತೃತ್ವದಲ್ಲಿ ಕುಣಿತ ಭಜನಾ ತಂಡಗಳಾದ ಶ್ರೀ ರಾಮಾಂಜನೇಯ ಭಜನಾ ಮಂಡಳಿ ಶಂಬೂರು, ಓಂ ಶ್ರೀ ಭಜನಾ ಮಂಡಳಿ ನಾಯಿಲ, ಶ್ರೀ ವಿನಾಯಕ ಭಜನಾ ಮಂಡಳಿ ದೋಟ. ಕೆದ್ದೇಲ್, ತಂಡಗಳಿಂದ ಭಜನಾ ಸಂಕೀರ್ತನ ಕಾರ್ಯಕ್ರಮ ನೆರವೇರಿತು. ಸೇವಾ ಪ್ರತಿನಿಧಿಗಳಾದ ಅಮಿತಾ, ವನಿತಾ, ಅನಿತಾ, ಮಲ್ಲಿಕಾ, ಬಬಿತಾ ಪ್ರಾರ್ಥಿಸಿ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಸಾಗತಿಸಿದರು. ಸೇವಾ ಪ್ರತಿನಿಧಿ ಕುಸುಮಾವತಿ ವಂದಿಸಿದರು. ಸಂದೀಪ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಪ್ರತಿಭಾ ವಸಂತ್ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು