8:48 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನರಿಕೊಂಬು ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಎಸ್ ಡಿಎಂಸಿ ಪ್ರಶಸ್ತಿ

29/03/2023, 10:00

ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅತ್ಯುತ್ತಮ‌ ಎಸ್.ಡಿ.ಎಂ.ಸಿ. ಪ್ರಶಸ್ತಿಗೆ ನರಿಕೊಂಬು ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಆಯ್ಕೆಯಾಗಿದ್ದು, ಇತ್ತೀಚೆಗೆ ನೇರಳಕಟ್ಟೆಯಲ್ಲಿ ನಡೆದ ಜಿಲ್ಲಾಮಟ್ಟದ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನರಿಕೊಂಬು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಸ್ವೀಕರಿಸಿದರು.
ಸರ್ಕಾರಿ ಶಾಲೆಯನ್ನು ಮಾದರಿಯಾದ ರೀತಿಯಲ್ಲಿ‌ ಅಭಿವೃದ್ದಿ ಗೊಳಿಸಿರುವುದು ಹಾಗೂ ಎಸ್ ಡಿ.ಎಂಸಿಯ ಕ್ರಿಯಾಶೀಲತೆಗೆ ಈ ಪ್ರಶಸ್ತಿ‌ ನೀಡಲಾಗಿದೆ. ಎಸ್.ಡಿ.ಎಂ.ಸಿ ಗೆ ದೊರೆತ ಪ್ರಶಸ್ತಿಯನ್ನು ಶಾಲೆಗೆ ಅರ್ಪಿಸುವ ಕಾರ್ಯಕ್ರಮವೂ ಅರ್ಥಪೂರ್ಣವಾಗಿ ನಡೆದಿದ್ದು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್ ನೇತೃತ್ವದಲ್ಲಿ ಸರ್ವ ಸದಸ್ಯರು ಶಾಲೆಗೆ ಆಗಮಿಸಿ ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಪ್ರಶಸ್ತಿ ಪುರಸ್ಕೃತ ಎಸ್ ಡಿಎಂಸಿ ಯನ್ನು ಬ್ಯಾಂಡ್ ವಾದ್ಯದ ಘೋಷಣೆಗಳೊಂದಿಗೆ ಶಾಲೆಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವೃಂದ ಸ್ವಾಗತಿಸಿ, ಪುಷ್ಪ ಸಿಂಚನದೊಂದಿಗೆ ವೇದಿಕೆಗೆ ಬರಮಾಡಿಕೊಂಡ ಕ್ಷಣ ಆತ್ಮೀಯತೆಯ ಜೊತೆಗೆ ಭಾವನಾತ್ಮಕವಾಗಿತ್ತು.ಈ ಸಂದರ್ಭದಲ್ಲಿ..
ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್, ಉಪಾಧ್ಯಕ್ಷೆ ಯಶೋಧ, ತಾಯಂದಿರ ಸಮಿತಿಯ ಅಧ್ಯಕ್ಷೆ, ನರಿಕೊಂಬು ಗ್ರಾಮ ಪಂಚಾಯತಿ ಸದಸ್ಯೆ ಉಷಾಲಾಕ್ಷಿ, ತಾಯಂದಿರ ಸಮಿತಿಯ ಉಪಾಧ್ಯಕ್ಷೆ ಮೇಘ, ಶಾಲಾ ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ, ಶಾಲೆಯ ಪೋಷಕ ಬಂಧುಗಳು, ವಿದ್ಯಾರ್ಥಿ ಸಮೂಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು