ಇತ್ತೀಚಿನ ಸುದ್ದಿ
ಜ.10ರಂದು ‘ನರಿಂಗಾನ ಕಂಬಳೋತ್ಸವ- 2026′: 12ರಂದು ನರಿಂಗಾನ ಗ್ರಾಮೋತ್ಸವ
06/01/2026, 00:06
ಮಂಗಳೂರು(reporterkarnataka.com): ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ 4ನೇ ವರ್ಷದ ಹೊನಲು ಬೆಳಕಿನ ಲವಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’-2026 ಜ.10 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.
ನಗರದ ಸರ್ಕ್ಯೂಟ್‌ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ವಿಧಾನಸಭಾ ಸ್ಪೀಕರ್ ಹಾಗೂ ನರಿಂಗಾನ ಕಂಬಳ ಸಮಿತಿಯ ಅಧ್ಯಕ್ಷ ಯು.ಟಿ. ಖಾದರ್ ಈ ವಿಷಯ ತಿಳಿಸಿದರು.
ಕಂಬಳೋತ್ಸವವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನದ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಲಿದ್ದು, ಮೂಡಬಿದ್ರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ದೀಪ ಬೆಳಗಿಸುವರು. ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿ ವೇ.ಮೂ.ವರ್ಕಾಡಿ ಹೊಸಮನೆ ರಾಜೇಶ್ ತಾಳಿತ್ತಾಯರು, ಮಂಗಳೂರು ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ರೆ. ಫಾ. ಡಾ. ಪೀಟರ್ ಪಾವುಲ್ ಸಲ್ದಾನ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಧಾರವಾಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎ.ಎಂ. ಖಾನ್, ಮಂಜನಾಡಿ ಕೇಂದ್ರ ಜುಮಾ ಮಸ್ಟಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಮೈಸೂರು ಬಾವ, ಜಿಲ್ಲಾ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಗುಣಪಾಲ ಕಡಂಬ ಸೇರಿದಂತೆ ಅನೇಕ ಗಣ್ಯರು, ವಿವಿಧ ಕ್ಷೇತ್ರಗಳ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ.
ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸುವರು.ವಿಧಾನಸಭಾಧ್ಯಕ್ಷ, ಹಾಗೂ ಸಮಿತಿ ಅಧ್ಯಕ್ಷ ಯು.ಟಿ. ಖಾದರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಎಚ್.ಕೆ. ಪಾಟೀಲ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಕಾಸರಗೋಡು ಸಂಸದ ರಾಜು ಮೋಹನ್ ಉನ್ನಿತ್ತನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಬಂಜಾರ ಗ್ರೂಫ್ ಆಫ್ ಹೊಟೇಲ್ಸ್ ಆಡಳಿತ ನಿರ್ದೇಶಕ ಡಾ. ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ಡಾ. ರೊನಾಲ್ಡ್ ಕೊಲಸೋ, ಅದಾನಿ ಗ್ರೂಪಿನ ಪ್ರೆಸಿಡೆಂಟ್ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಕುಮಾರ್ ಆಳ್ವ, ನ್ಯಾಷನಲ್ ಕಮಿಷನ್ ಫಾರ್ ಎಲೈಡ್ ಅಂಡ್ ಹೆಲ್ತ್ ಕೇರ್ ಪ್ರೊಫೆಶನ್ಸ್ ಕರ್ನಾಟಕ ಚೇರ್ಮನ್ ಡಾ. ಯು.ಟಿ. ಇಫ್ತಿಕರ್ ಅಲಿ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರುಗಳು, ವಿವಿಧ ನಿಗಮ ಮಂಡಳಿ ಅಧ್ಯಕ್ಷರು, ಉದ್ಯಮಿಗಳು, ಯುನಿವರ್ಸಿಟಿಗಳ ಕುಲಾಧಿಪತಿಗಳು, ಧಾರ್ಮಿಕ ಪರಿಷತ್ ಸದಸ್ಯರು ವಿವಿಧ ಪಕ್ಷಗಳ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿ ಜಿಲ್ಲಾಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕಾರಿಯ ಜೋಕಟ್ಟೆ, ಸಹಕಾರ ರತ್ನ ಪುರಸ್ಕೃತ ಟಿ.ಜಿ. ರಾಜಾರಾಮ್ ಭಟ್, ಭಾಸ್ಕರ್ ಕೋಟ್ಯಾನ್ ಹಾಗೂ ಬಾರ್ಕೂರು ಶಾಂತಾರಾಮ್ ಶೆಟ್ಟಿ, ಕರ್ನಾಟಕ ಕ್ರೀಡಾ ರತ್ನ ಭಾಸ್ಕರ್ ದೇವಾಡಿಗ, ವಿಶ್ವಕಪ್ ವಿಜೇತ ಭಾರತದ ತಂಡದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಕಾರ್ಕಳ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ ಪಂಪದ ಚಿಪ್ಪಾರು, ಪ್ರತಿಭಾನ್ವಿತ ವಿದ್ಯಾರ್ಥಿನಿ ಅಪೇಕ್ಷ ಪುಂಡಿಕಾಯಿ ಅವರನ್ನು ಸಾರ್ವಜನಿಕವಾಗಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕನ್ನಡ ಚಿತ್ರರಂಗದ ನಟ ರಿಷಬ್ ಶೆಟ್ಟಿ, ತುಳು ರಂಗಭೂಮಿಯಲ್ಲಿ ಮಿಂಚಿರುವ ರೂಪೇಶ್ ಶೆಟ್ಟಿ, ಅರವಿಂದ ಬೋಳಾರ್, ದೇವದಾಸ್ ಕಾಫಿಕಾಡ್, ಭೋಜರಾಜ್ ವಾಮಂಜೂರು, ಪ್ರದೀಪ್ ಆಳ್ವ ಕದ್ರಿ, ಮಂಜು ಎಂ ರೈ ಭಾಗವಹಿಸಲಿಕ್ಕಿದ್ದಾರೆ.
ಜ.12ರಂದು ನರಿಗಾನ ಗ್ರಾಮ ಪಂಚಾಯತ್ ಆಶ್ರಯದಲ್ಲಿ ನರಿಂಗಾನ ಗ್ರಾಮೋತ್ಸವ ಎಂಬ ವಿಶೇಷ ಸ್ನೇಹ ಸಮ್ಮಿಲನ, ಪ್ರತಿಭಾ ಪುರಸ್ಕಾರ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ನೃತ್ಯವೇ ವಿದ್ಯಾ ಸಂಗೀತ ರಸಮಂಜರಿ ಕ್ರೀಡಾಕೂಟಗಳು ಪುರುಷರಿಗೆ ಮತ್ತು ಮಹಿಳೆಯರಿಗೆ ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವರು.
ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ, ಪ್ರಧಾನ ಕಾರ್ಯದರ್ಶಿ ನವಾಝ್ ನರಿಂಗಾನ, ಕಣಚೂರು ಸಮೂಹ ಸಂಸ್ಥೆಯ ಚೇರ್ ಮೆನ್ ಯು.ಕೆ. ಮೋನು, ಉಪಾಧ್ಯಕ್ಷ ಮ್ಯಾಕ್ಸಿಯಂ ಡಿ’ಸೋಜ ಉಪಸ್ಥಿತರಿದ್ದರು.













