9:31 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಯುವಜನ ಮತ್ತು ಕ್ರೀಡಾ ಇಲಾಖೆ ಕ್ರಮ: ಸಚಿವ ಬಿ. ನಾಗೇಂದ್ರ

14/01/2024, 12:58

ಉಳ್ಳಾಲ(reporterkarnataka.com): ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ.
ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದರು.


ಉಳ್ಳಾಲ ತಾಲೂಕಿನ ನರಿಂಗಾನದ ಲವ- ಕುಶ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನದ ಮೋರ್ಲ ಬೋಳದಲ್ಲಿ ನಡೆದ ದ್ವಿತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ `ನರಿಂಗಾನ ಕಂಬಳೋತ್ಸ’ವದಲ್ಲಿ ಅವರು ಮಾತನಾಡಿದರು.
ಮಿತ್ತಕೋಡಿ ಶರತ್ ಕಾಜವ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಂಗಳೂರಿನ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಿದಾಗ ಕ್ರೀಡಾ ಇಲಾಖೆ ಒಂದು ಕೋಟಿಯನ್ನು ಕೊಟ್ಟದೆ. ಕರಾವಳಿಯಲ್ಲಿ ನಡೆಯುವ ಕಂಬಳಕ್ಕೂ ಪ್ರೋತ್ಸಾಹ ನೀಡಲು ಸಿದ್ಧವಿದೆ ಎಂದರು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಎಲ್ಲ ಜಾತಿ, ಧರ್ಮದವರು ಸೇರಿ ಮಾಡುವ ಸಾರ್ವಜನಿಕ ಕಂಬಳವಾಗಿದ್ದು, ಇದು ಸೌಹಾರ್ದ ತೆಯ ಪ್ರತೀಕವಾಗಿದೆ ಎಂದರು.
ಮಾಜಿ ಸಚಿವ ರಮಾನಾಥ ರೈ, ವಿದಾನಸಭಾ ಸದಸ್ಯ ಹರೀಶ ಕುಮಾರ್, ಜಿಲ್ಲಾ„ಕಾರಿ ಮುಲ್ಲೈ ಮುಗಿಲನ್, ಕ್ರೀಡಾ ಕಮಿಷನರ್ ಶಶಿಕುಮಾರ್, ಕಣಚೂರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಯು.ಕಣಚೂರು ಮೋನು, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಮಂಜನಾಡಿ ದರ್ಗಾ ಅಧ್ಯಕ್ಷ ಅಬ್ದುಲ್ ಅಜೀಝ್ ಮೈಸೂರು ಬಾವ, ದ.ಕ.ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ, ಮುಂಬೈಯ ಉದ್ಯಮಿ ವಿವೇಕ್ ಶೆಟ್ಟಿ ಬೊಲ್ಯಗುತ್ತು, ದೇರಳಕಟ್ಟೆಯ ದ.ಕಂಫಟ್ರ್ಸ್ ಇನ್‍ನ ಚಂದ್ರಹಾಸ ಶೆಟ್ಟಿ, ರಕ್ಷಿತ್ ಶಿವರಾಮ್, ಮೆಸ್ಕಾಂನ ವ್ಯವಸ್ತಾಪಕ ನಿರ್ದೇಶಕಿ ಡಿ. ಪದ್ಮಾವತಿ, ಕಟಪಾಡಿ ಕಂಬಳದ ರೋಹಿತ್ ಹೆಗ್ಡೆ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪಜೀರುಗೇದಗೆಬೈಲ್‍ನಲ್ಲಿ ಲವ – ಕುಶ ಕಂಬಳವನ್ನು 25 ವರುಷಗಳ ಕಾಲ ಮುನ್ನಡೆಸಿದ ಮಿತ್ತಕೋಡಿ ವೆಂಕಪ್ಪ ಕಾಜವ ಮತ್ತು ಉಮೇಶ್ ಮಹಾಬಲ ಶೆಟ್ಟಿ ಮಾಣಿಸಾಗು ಅವರನ್ನು ಗೌರವಿಸಲಾಯಿತು.
ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಸ್ವಾಗತಿಸಿದರು. ನವಾಝ್ ನರಿಂಗಾನ ಮತ್ತು ಜೋಸೆಫ್ ಕುಟಿನ್ಹ ಸಮ್ಮಾನ ಪತ್ರ ವಾಚಿಸಿದರು. ಸತೀಶ್ ಕುಮಾರ್ ಪುಂಡಿಕಾೈ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು