5:13 AM Wednesday28 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ನಟ ಚೇತನ್ ನಾಪತ್ತೆ; ಎಫ್ ಬಿ ಲೈವ್ ನಲ್ಲಿ ಪತ್ನಿ ಮೇಘಾ ಆತಂಕ; ಕೊನೆಗೂ ಪೊಲೀಸ್ ವಶದಲ್ಲಿರುವ ಮಾಹಿತಿ ಬಹಿರಂಗ

22/02/2022, 22:12

ಬೆಂಗಳೂರು(reporterkarnataka.com): ನಟ ಚೇತನ್ ಅವರ ಪತ್ನಿ ಮೇಘಾ ಅವರು ತನ್ನ ಪತಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂದು ಫೇಸ್ ಬುಕ್ ಲೈವ್ ನಲ್ಲಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ನಟ ಚೇತನ್ ಅವರು ಶೇಷಾದ್ರಿಪುರಂ ಪೊಲೀಸ್ ವಶದಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಪೊಲೀಸರು ತನ್ನ ಪತಿ ಚೇತನ್ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಮೇಘಾ ಫೇಸ್ ಬುಕ್ ಲೈವ್ ನಲ್ಲಿ ದೂರಿದ್ದರು. ಇದಲ್ಲದೆ ಮಂಗಳವಾರ ಮಧ್ಯಾಹ್ನ ದಿಂದ ಚೇತನ್ ಅವರು ಎಲ್ಲೂ ಕಾಣಿಸಲಿಲ್ಲ. ಈ ನಡುವೆ ಚೇತನ್ ಅಭಿಮಾನಿಗಳು ಕೂಡ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರು. ಇದರ ಬೆನ್ನಲ್ಲೇ ವಿಚಾರಣೆಗಾಗಿ ಚೇತನ್ ಅವರನ್ನು ಕರೆತರಲಾಗಿದೆ ಎಂದು ಸೆಂಟ್ರಲ್ ವಿಭಾಗದ ಡಿಸಿಪಿ ಮಾಹಿತಿ ನೀಡಿದ್ದಾರೆ. 

ಹಿಜಾಬ್ ವಿವಾದ ವಿಚಾರಣೆ ನಡೆಯುವ ಸಂದರ್ಭದಲ್ಲಿ ಹೈಕೋರ್ಟ್ ಜಡ್ಜ್‌ ಅವರನ್ನು ನಿಂದಿಸಿರುವ ಆರೋಪದ ಮೇಲೆ ಪೊಲೀಸರು ಚೇತನ್ ಅವರನ್ನು ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು