ಇತ್ತೀಚಿನ ಸುದ್ದಿ
ನಟ, ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣು: ಅಪಾರ್ಟ್ ಮೆಂಟಿನಲ್ಲಿ ಆತ್ಮಹತ್ಯೆ
03/11/2024, 13:52
ಬೆಂಗಳೂರು(reporterkarnataka.com): ನಟ, ನಿರ್ದೇಶಕ ಗುರುಪ್ರಸಾದ್ ಅವರು ನಗರದ ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು ಯಾರಿಗೂ ಗೊತ್ತಿರಲಿಲ್ಲ. ಅಪಾರ್ಟ್ ಮೆಂಟ್ ನಲ್ಲಿ ವಾಸನೆ ಬಂದ ಬಳಿಕ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮಠ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಗುರುಪ್ರಸಾದ್ ಅವರು ಕೆಲವು ಚಲನಚಿತ್ರಗಳಲ್ಲಿ ನಟಿಸಿದ್ದರು.
ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿನಿಂದ ವಾಸ ಮಾಡುತ್ತಿದ್ದರು. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಪ. ಕೌಟುಂಬಿಕ ಕಲಹ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ.
1972ರಲ್ಲಿ ಕನಕಪುರದಲ್ಲಿ ಜನಿಸಿದ್ದ ಗುರುಪ್ರಸಾದ್ ಅವರು ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗನಾಯಕ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಮಠ ಸಿನಿಮಾ ಅವರಿಗೆ ಹೆಸರು ತಂದು ಕೊಟ್ಟಿತ್ತು. ಬಿಗ್ ಬಾಸ್ ನಲ್ಲಿಯೂ ಸ್ಪರ್ಧಿಯಾಗಿದ್ದರು.
ಅವರ ಅಡೆಮಾ ಸಿನಿಮಾ ಶೂಟಿಂಗ್ ನಡೆಯುತಿತ್ತು.
ಡೆತ್ ನೋಟ್ ಬರೆದಿಟ್ಟಿದ್ದು, ಮಾಹಿತಿ ಇನ್ನು ಹೊರಬರಬೇಕಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ.