ಇತ್ತೀಚಿನ ಸುದ್ದಿ
ನಟ ವಿಜಯರಾಘವೇಂದ್ರ ಪತ್ನಿ ವಿಧಿವಶ: ವಿದೇಶ ಪ್ರವಾಸದಲ್ಲಿದ್ದಾಗ ಹೃದಯಾಘಾತ
07/08/2023, 11:43
ಮಂಗಳೂರು(reporter Karnataka.com): ಕನ್ನಡ ಚಿತ್ರನಟ ವಿಜಯ ರಾಘವೇಂದ್ರ ಪತ್ನಿ ಹೃದಯಘಾತದಿಂದ ವಿಧಿವಶರಾಗಿದ್ದಾರೆ.
ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ವಿದೇಶ ಪ್ರವಾಸದಲ್ಲಿರುವಾಗ ತೀವ್ರ ಹೃದಯಾಘಾತಕ್ಕೆ ತುತ್ತಾಗಿ ನಿಧನ ಹೊಂದಿದ್ದಾರೆ.
ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ
ಬಿ.ಕೆ. ಶಿವರಾಂ ಅವರ ಪುತ್ರಿ. ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಬೆಳ್ತಂಗಡಿಯಿಂದ ಇವರ ಸಹೋದರ ರಕ್ಷಿತ್ ಶಿವರಾಂ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಸ್ಪಂದನ ರವರ ಅಗಲಿಕೆಯಿಂದ ಇಡೀ ಕುಟುಂಬ ಸೇರಿದಂತೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.