2:54 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

‘ನಟಿ ರಶ್ಮಿಕಾ ನನ್ನ ಪ್ರಿಯತಮೆ..’ ಎಂದ ವಿಜಯ್ ದೇವರಕೊಂಡ ಬಿಚ್ಚಿಟ್ಟ ಸೆನ್ಸೇಷನಲ್ ಸೀಕ್ರೆಟ್ ಏನು?

29/07/2022, 19:54

ಮುಂಬೈ(reporterkarnataka.com): ದಕ್ಷಿಣ ಭಾರತದ ಬಹು ಬೇಡಿಕೆಯ ತಾರೆ ರಶ್ಮಿಕಾ ಮಂದಣ್ಣ ನನ್ನ ಪ್ರಿಯತಮೆ ಎಂದು ತೆಲುಗು ನಟ ವಿಜಯ್ ದೇವರಕೊಂಡ ಹೇಳಿದ್ದಾರೆ. ಕರಣ್ ಜೋಹರ್ ನಡೆಸಿಕೊಡುತ್ತಿರುವ ‘ಕಾಫಿ ವಿತ್ ಕರಣ್ 7ನೇ ಆವೃತ್ತಿಯಲ್ಲಿ ನಟ ರಶ್ಮಿಕಾ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಟ ವಿಜಯ್ ದೇವರಕೊಂಡ, ‘ನಾವಿಬ್ಬರೂ ಎರಡು ಚಿತ್ರಗಳನ್ನು ಒಟ್ಟಿಗೆ ಮಾಡಿದ್ದೇವೆ. ಅವಳು ಡಾರ್ಲಿಂಗ್ ಇದ್ದ ಹಾಗೆ’ ಎಂದಿದ್ದಾರೆ. ಅಲ್ಲದೇ, ‘ನಾನು ಅವಳನ್ನು ತುಂಬಾ ಇಷ್ಟಪಡುತ್ತೇನೆ. ಅವಳು ನನಗೆ ನಿಜವಾಗಿಯೂ ಒಳ್ಳೆಯ ಸ್ನೇಹಿತೆ’ ಎಂದು ವಿಜಯ್ ಎಂದು ಹೇಳಿಕೊಂಡಿದ್ದಾರೆ.

ಈ ಹಿಂದೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕಾಂಬಿನೇಷನ್ ನಲ್ಲಿ ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್ ಸಿನಿಮಾಗಳು ಮೂಡಿ ಬಂದಿದ್ದವು.
ಇನ್ನು, ಕರಣ್ ಜೋಹರ್ ನಡೆಸಿಕೊಡುತ್ತಿರುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಮೂವರ ಜೊತೆ ಸೆಕ್ಸ್ ಮಾಡಲು ಅಭ್ಯಂತರವಿಲ್ಲ ಎಂದು ಹೇಳುವ ಮೂಲಕ ವಿಜಯ್ ದೇವರಕೊಂಡ ಮತ್ತೊಂದು ಸೆನ್ಸೇಷನಲ್ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.


ಕರಣ್ ಜೋಹರ್, ‘ನೀವು ಎಂದಾದರೂ ಸಾರ್ವಜನಿಕ ಸ್ಥಳದಲ್ಲಿ ಲೈಂಗಿಕ ಕ್ರಿಯೆ ನಡೆಸಿದ್ದೀರಾ..?’ ಎಂದು ಕೇಳಿದಾಗ, ‘ಬೋಟ್‌ನಲ್ಲಿ’ ಎಂದು ವಿಜಯ್ ಉತ್ತರಿಸಿದರು. ‘ಬೇರೆ ಸಾರ್ವಜನಿಕ ಸ್ಥಳಗಳಲ್ಲಿ?’ ಎಂದಾಗ, ‘ಹತಾಶೆಯ ಸಂದರ್ಭಗಳಲ್ಲಿ ಕಾರಿನಲ್ಲಿ’ ಎಂದು ಹೇಳಿದ್ದಾರೆ. ನಟ ವಿಜಯ್ ದೇವರಕೊಂಡ ಈ ಮಾತು ವೈರಲ್ ಆಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು