3:40 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ನ್ಯಾಷನಲ್ ಹೆರಾಲ್ಡ್‌ ಕೇಸ್ | ಕಾಂಗ್ರೆಸ್ ನಾಯಕಿ ಸೋನಿಯಾ, ರಾಹುಲ್ ವಿರುದ್ಧ ದೆಹಲಿ ಕೋರ್ಟ್ ತೀರ್ಪು ಸ್ವಾಗತಾರ್ಹ: ಮಂಜುನಾಥ ಭಂಡಾರಿ

19/12/2025, 23:11

ಮಂಗಳೂರು(reporterkarnataka.com): ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿಯ ಹೌಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿರುವುದನ್ನು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದಾರೆ. ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಮೂರ್ತಿ ವಿಶಾಲ್ ಗೋಗಾನೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿ ವಿಚಾರಣೆಗೆ ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದರಿಂದ ಜನರಿಗೆ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವುಗಳ ಮೇಲೆ ವಿಶ್ವಾಸ ಹೆಚ್ಚಿದೆ. ಕಾಂಗ್ರೆಸ್ ಪಕ್ಷ ನ್ಯಾಯಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಸದಾ ಸತ್ಯ ಮತ್ತು ನ್ಯಾಯದ ಹಾದಿಯಲ್ಲಿ ಮುನ್ನಡೆಯಲಿದೆ ಎಂದು ಭಂಡಾರಿ ಅವರು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು