12:13 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದ್ರೂ ರಸ್ತೆ ವ್ಯವಸ್ಥೆ ಇಲ್ಲ: ಕಾಲುಸಂಕದಲ್ಲೇ ಹೊಳೆ ದಾಟುತ್ತಿರುವ ಪರಿಶಿಷ್ಟ ಜನರ ಕುಟುಂಬ!

18/08/2024, 11:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ತರುವೆ ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ನೂರಾರು ಎಕರೆ ಕೃಷಿ ಭೂಮಿ ಸಂಪರ್ಕ ರಸ್ತೆ ಇಲ್ಲದೇ ಪಾಳು ಬಿದ್ದಿದೆ.ಇಲ್ಲಿನ ಪರಿಶಿಷ್ಟ ಪಂಗಡದ ಕುಟುಂಬವೊಂದು ಮಳೆಗಾಲ ಬಂತೆಂದರೆ ತಮ್ಮ ಮನೆ ತಲುಪಲು ಸಾಧ್ಯವಾಗದೇ ಕಂಗಾಲಾಗುತ್ತಿದೆ.ಕೊಟ್ಟಿಗೆಹಾರದ ತರುವೆ ಗ್ರಾಮದ ಸುರೇಶ್ ನಾಯ್ಕ್ ಅವರ ಕುಟುಂಬದ ಸತ್ಯ ಕಥೆಯಿದು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಹೇಮಾವತಿಯ ಉಪ ನದಿಯಾದ ಸೋಮಾವತಿ ಮಳೆಗಾಲದಲ್ಲಿ ತುಂಬಿ ಹರಿದು ಹೇಮಾವತಿ ಸೇರುತ್ತದೆ. ಆ ನದಿಯ ಮತ್ತೊಂದು ಬದಿಯಲ್ಲಿ ಸುರೇಶ್ ನಾಯ್ಕ್ ಕುಟುಂಬ ಅನೇಕ ವರ್ಷದಿಂದ ಸೂರು ಕಟ್ಟಿಕೊಂಡು ಜೀವನ ನಡೆಸುತ್ತಿದ್ದು ಮಳೆಗಾಲ ಬಂತೆಂದರೆ ರಸ್ತೆ ಸಂಪರ್ಕವೂ ಇಲ್ಲದೇ ಜೀವ ಭಯದಲ್ಲೇ ಜೀವನ ನಡೆಸಿ ಸಂಪರ್ಕ ಕಸಿದು ಹೋಗುತ್ತಿದೆ. ಕುಟುಂಬ ಹಳ್ಳ ದಾಟಿ ಮನೆ ತಲುಪುವ ಸಾಹಸದ ಕೆಲಸಕ್ಕೆ ಇವರು ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ.
ಅಪಾಯಕಾರಿ ಕಾಲುಸಂಕ(ಮರದದಿಮ್ಮಿಯ ಜೋಡಣೆ) ದಾಟಿ ಮನೆ ಸೇರುವುದು ಇವರಿಗೆ ಅನಿವಾರ್ಯತೆಯಾಗಿದೆ. ತುಂಬಿ ಹರಿಯುವ ಸೋಮಾವತಿ ಹಳ್ಳವನ್ನು ದಾಟಿ ಆಚೇಗಿನ ಕೃಷಿ ಭೂಮಿಯಲ್ಲಿ ಸಾಗುವಳಿ ಮಾಡಲು ಅನುಕೂಲ ಇಲ್ಲದ ಕಾರಣಕ್ಕೆ ನೂರಾರು ಎಕರೆ ಫಲವತ್ತಾದ ಗದ್ದೆಗಳು ಕೃಷಿ ಮಾಡದೇ ಪಾಳು ಬಿಟ್ಟು ಬರಡಾಗಿವೆ. ಈ ಪ್ರದೇಶಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಜನಪ್ರತಿನಿಧಿಗಳಿಗೆ, ಶಾಸಕರಿಗೆ ಮೂರು ವರ್ಷದಿಂದ ಸಂತ್ರಸ್ತ ಸುರೇಶ್ ಕುಟುಂಬ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೂ ಕಾಲು ಸಂಕ ಮಾತ್ರ ಬದಲಾಗಿಲ್ಲ. ಪರಿಶಿಷ್ಟ ಪಂಗಡದ ಕುಟುಂಬಕ್ಕೆ ಮೂಲಭೂತ ಸಂಪರ್ಕದ ಆಸರೆ ಸಿಗದೇ ಪರದಾಡುವಂತಾಗಿದೆ. ಮಲೆನಾಡಿನ ಈ ಗ್ರಾಮೀಣ ಪ್ರದೇಶದಲ್ಲಿ ಕಿರು ಸೇತುವೆ ನಿರ್ಮಾಣಕ್ಕೆ ಸರ್ಕಾರದಿಂದ ಇರುವ ಅವಕಾಶವನ್ನು ಬಳಸಿಕೊಂಡು ಈ ತರುವೆ ಗ್ರಾಮದ ಕುಟುಂಬಕ್ಕೂ ಕೂಡ ಸೇತುವೆ ನಿರ್ಮಾಣ ಮಾಡಲು ಸ್ಥಳೀಯರ ಒತ್ತಾಯವಿದೆ.

ಹಾಗಾದಲ್ಲಿ ಈ ಭಾಗದ ಕೃಷಿಕರಿಗೂ ಕೂಡ ಶಾಶ್ವತ ಪರಿಹಾರ ಸಿಕ್ಕಿದಂತಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ಈ ಕುಟುಂಬದ ಸಮಸ್ಯೆ ಬಗೆಹರಿಸಲು ಮುಂದೆ ಬರಬೇಕು.

*ಮೂರು ವರ್ಷದಿಂದ ನಮಗೆ ಕಿರು ಸೇತುವೆ ಮಾಡಿಕೊಡಿ ಎಂದು ಸರ್ಕಾರಿ ಅಧಿಕಾರಿಗಳಿಗೂ, ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ.ಆದರೂ ಯಾವುದೇ ಪ್ರಯೋಜನವಾಗಿಲ್ಲ'*
ಸುರೇಶ್ ನಾಯ್ಕ್, ಸಂತ್ರಸ್ತ,ಕೊಟ್ಟಿಗೆಹಾರ.

ಇತ್ತೀಚಿನ ಸುದ್ದಿ

ಜಾಹೀರಾತು