11:49 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್‌ ಶಿಪ್‌: ಮಂಗಳೂರಿನ ಅಣ್ಣ- ತಂಗಿ ಪದಕಗಳ ಅದ್ಬುತ ಸಾಧನೆ

04/07/2025, 20:48

ಮಂಗಳೂರು(reporterkarnataka.com): ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಜೂನ್ 25 ರಿಂದ 28 ರವರೆಗೆ ನಡೆದ 20ನೇ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ಮಂಗಳೂರು ಮೂಲದ ಅಣ್ಣ-ತಂಗಿ ಅದ್ಭುತ ಸಾಧನೆ ಮೆರೆದಿದ್ದಾರೆ. ತಮ್ಮ ಅಮೋಘ ಆಟದ ಮೂಲಕ ಡೇನಿಯಲ್‌ ಕೊನ್ಸೆಸಾವ್‌ ಹಾಗೂ ಡ್ಯಾಶಿಯಲ್‌ ಕೊನ್ಸೆಸಾವ್‌ ಪದಕದ ಸಾಧನೆ ಮೆರೆದಿದ್ದಾರೆ.


ಡ್ಯಾಶಿಯಲ್‌ ಕೊನ್ಸೆಸಾವ್‌ 2 ಚಿನ್ನ (500 ಮೀ‌. & 1000 ಮೀ.) ಮತ್ತು 1 ಬೆಳ್ಳಿ (1500 ಮೀ‌.) ಪದಕಗಳನ್ನು ಪಡೆದರೆ, ಇವರ ಸಹೋದರ ಡೇನಿಯಲ್‌ ಕೊನ್ಸೆಸಾವ್ 1500 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ.
ಇವರು ಮಂಗಳೂರಿನ ಫ್ರಾನ್ಸಿಸ್‌ ಕೊನ್ಸೆಸಾವ್‌ ಮತ್ತು ಡೋರಿಸ್‌ ಕೊನ್ಸೆಸಾವ್‌ ದಂಪತಿಯ ಮಕ್ಕಳಾಗಿದ್ದು, ಡೇನಿಯಲ್‌ ಕೊನ್ಸೆಸಾವ್‌ ಸಂತ ಜೋಸೆಫ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿ.ಇ. ವಿದ್ಯಾಭ್ಯಾಸ ಪಡೆಯುತ್ತಿದ್ದರೆ, ಡ್ಯಾಶಿಯಲ್‌ ಎಸ್‌ಡಿಎಂ ಕಾಲೇಜಿನ ಬಿಬಿಎ ವಿದ್ಯಾರ್ಥಿನಿಯಾಗಿದ್ದಾಳೆ. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ತರಬೇತುದಾರರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು