9:54 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಉಪನ್ಯಾಸಕ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಗೆ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ

25/07/2026, 09:03

ಕಾಸರಗೋಡು(reporterkarnataka.com): ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಅಧ್ಯಕ್ಷರಾಗಿ ನಿರಂತರವಾಗಿ ಕನ್ನಡಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತಸಾಹಿತಿ ಜಯಾನಂದ ಪೆರಾಜೆಯವರನ್ನು 2026ನೇ ಸಾಲಿನ ಸಾಲಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ.ಕೆ.ಎನ್.ವೆಂಕಟರಮಣ ಹೊಳ್ಳ ಮತ್ತು ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ.ವಾಮನ ರಾವ್ ಬೇಕಲ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‌ಅವರು ಕನ್ನಡ ಭಾಷಾ ಶಿಕ್ಷಕರಾಗಿ, ಉಪನ್ಯಾಸಕರಾಗಿ ಕಳೆದ 40 ವರ್ಷಗಳಿಂದ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತರಾಗಿದ್ದು ಲೇಖನಗಳ ಮೂಲಕ ಪರಿಚಿತರಾಗಿದ್ದಾರೆ. ರಾಷ್ಟ್ರ ಮಟ್ಟದ ಹಲವು ಕವಿಗೋಷ್ಠಿಯಲ್ಲಿ ಭಾಗವಹಿಸಿ ಚುಟುಕು ಕವನ ಸಂಕಲನಗಳನ್ನು ಹೊರತಂದಿದ್ದಾರೆ. ಬಹುಮುಖ ವ್ಯಕ್ತಿತ್ವದ ಪ್ರತಿಭಾವಂತ,ಕಲಾವಿದ, ನಿರ್ದೇಶಕರಾಗಿ, ಕ್ರೀಯಾಶೀಲ ತರಬೇತುದಾರರಾಗಿ, ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ಜೇಸಿ,ಎಸ್.ಸಿ.ಐ. ಲಯನ್ಸ್ ಕ್ಲಬ್ ಹಾಗೂ ಹಲವು ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರ, ಸಾಮಾಜಿಕ ಕಾರ್ಯದಲ್ಲಿ ಅವಿರತ ತೊಡಗಿಸಿಕೊಂಡಿರುವ ಪೆರಾಜೆಯವರ ಬಹುಮುಖಿ ಸೇವೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಆಯ್ಕೆ ಸಮಿತಿ ಪ್ರಕಟಣೆ ತಿಳಿಸಿದೆ.
ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು