4:05 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

National Science Day | ಸಿಬ್ಬಂದಿಗಳಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಪ್ರತಿಜ್ಞಾವಿಧಿ ಬೋಧನೆ

28/02/2025, 20:08

ಬೆಂಗಳೂರು(reporterkarnataka.com): ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಪ್ರತಿಜ್ಞಾವಿಧಿಯನ್ನು ಬೋಧಿಸಿದ ಬಳಿಕ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಪ್ರತಿ ದಿನದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾನ ವಿಧಿಯಲ್ಲಿ ತಿಳಿಸಿರುವಂತೆ, ನಾವು ಪ್ರಶ್ನೆಯನ್ನು ಮಾಡದೇ ಯಾವುದೇ ತರ್ಕವನ್ನು ಒಪ್ಪಬಾರದು ಹಾಗೂ ಸಂವಿಧಾನದ ಮೂಲಭೂತ ಕರ್ತವ್ಯದ ಆಶಯದಂತೆ ಮೌಢ್ಯತೆ ಮತ್ತು ಅಂಧಕಾರವನ್ನು ನಿರ್ಮೂಲನೆ ಮಾಡಿ ಜೀವ ಜಗತ್ತಿಗೆ ಪೂರಕವಾದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು