7:31 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ನವಭಾರತದ ಚಾಣಕ್ಯ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ: ಸ್ಪೀಕರ್ ಖಾದರ್

27/12/2024, 13:19

ಮಂಗಳೂರು(reporterkarnataka.com):ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕ ತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ. 1991ರ ಆರ್ಥಿಕ ಬಿಕ್ಕಟ್ಟಿನ ತೀವ್ರ ಸಂಕಷ್ಟದಲ್ಲಿ ಭಾರತವು ಸ್ಥಗಿತಗೊಂಡಿದ್ದ ಸಮಯದಲ್ಲಿ, ಅಧಿಕಾರ ಚುಕ್ಕಾಣಿ ಹಿಡಿದ ಡಾ. ಮನಮೋಹನ್ ಸಿಂಗ್ ಅವರ ದೂರದರ್ಶಿತ್ವವು ದೇಶವನ್ನು ಆರ್ಥಿಕ ಪುನಶ್ಚೇತನದ ಮಾರ್ಗದಲ್ಲಿ ನಡೆಸಿತು. ಅವರು ವಿದೇಶದಲ್ಲಿ ಅಡವಿಟ್ಟಿದ್ದ ಚಿನ್ನವನ್ನು ಬಿಡುಗಡೆ ಮಾಡಿದ್ದು ಮಾತ್ರವಲ್ಲದೆ, ಅವರ ನೇತೃತ್ವದಲ್ಲಿ ಆರಂಭವಾದ ಆರ್ಥಿಕ ಉದಾರೀಕರಣದ ನೀತಿಗಳು, ಭಾರತದ ಪಾಲಿಗೆ ಆರ್ಥಿಕ ಸ್ವಾವಲಂಬನೆ, ಸಮೃದ್ಧಿಯ ಹೊಸ ಅಧ್ಯಾಯವನ್ನೇ ತೆರೆಯಿತು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಇಡೀ ವಿಶ್ವ ಆರ್ಥಿಕತೆಯಿಂದ ಕಂಗಾಲಾದಾಗ ಭಾರತದ ಆರ್ಥಿಕತೆ ದೃಢವಾಗಿತ್ತು ಮತ್ತು ಭಾರತದ ಪ್ರತಿ ಮನೆ ಬಾಗಿಲಲ್ಲೂ ಇಂದು ಆರ್ಥಿಕ ಸ್ವಾತಂತ್ರ್ಯ ಹಾಗೂ ಸ್ವಾವಲಂಬನೆ ಕಂಡುಬಂದಿದ್ದರೆ ಅದು ಅವರ ಕೊಡುಗೆ ಎಂಬುವುದನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಅವರ ಪ್ರಗತಿಪರ ದೃಷ್ಠಿಕೋನ ಮತ್ತು ಅವಿಸ್ಮರಣೀಯ ಕೊಡುಗೆಗಳು ದೇಶದ ಮುಂದಿನ ತಲೆಮಾರಿಗೆ ಸ್ಫೂರ್ತಿಯಾಗಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು