4:11 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ನವ ಮಂಗಳೂರು ಬಂದರು: 270 ಪ್ರಯಾಣಿಕರ ಹೊತ್ತ 5ನೇ ಕ್ರೂಸ್ ಹಡಗು ಆಗಮನ

02/03/2024, 21:11

ಮಂಗಳೂರು(reporterkarnataka.com): ಪ್ರಸ್ತು ಋತುವಿನ 5ನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ 8:00 ಗಂಟೆಗೆ ನವಮಂಗಳೂರು ಬಂದರಿಗೆ ಆಗಮಿಸಿತು.


ಹಡಗು 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ಬಂದರಿಗೆ ಆಗಮಿಸಿತು. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರವಾಸಿಗರು ಕ್ರೂಸ್ ಲಾಂಜ್‌ನಲ್ಲಿ ವಿವಿಧ ಸಾಂಸ್ಕೃತಿಕ ಆಕರ್ಷಣೀಯ ಸ್ಥಳಗಳನ್ನು ನೋಡಿ ಆನಂದಿಸಿದರು.
ಪ್ರವಾಸಿಗರಿಗೆ ವೈದ್ಯಕೀಯ ತಪಾಸಣೆ, ಬಹು ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಮಂಗಳೂರು ನಗರದ ಸುತ್ತಮುತ್ತ ಸಾರಿಗೆ ಬಸ್‌ಗಳು ಮತ್ತು ವಿಶೇಷ ಟ್ಯಾಕ್ಸಿಗಳು, ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ವರ್ಚುವಲ್ ರಿಯಾಲಿಟಿ ಅನುಭವ ವಲಯ, ಉಚಿತ ವೈಫೈ ಸೇರಿದಂತೆ ಅನೇಕ ಸಿದ್ಧತೆಗಳನ್ನು ಮಾಡಲಾಗಿದೆ. ಎನ್ ಎಂಪಿಟಿ ಮತ್ತು ಪ್ರವಾಸೋದ್ಯಮ ಸಚಿವಾಲಯದಿಂದ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಬಿಂಬಿಸುವ ಸೆಲ್ಫಿ ಸ್ಟ್ಯಾಂಡ್ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು