11:10 AM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ನವೀನ್ ಡಿಸೋಜ ರಾಜ್ಯಸಭೆಗೆ?: ಕಾಂಗ್ರೆಸ್ ನ 3 ಸ್ಥಾನಗಳಲ್ಲಿ ಒಂದು ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲು ಸಾಧ್ಯತೆ

24/05/2026, 21:32

ಬೆಂಗಳೂರು(reporterkarnataka.com): ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಈ ಬಾರಿ ಮೀಸಲಿರಿಸುವ ಸಂಭವ ಹೆಚ್ಚಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಕಳೆದ ಬಾರಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿತ್ತು. ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಲಿದು ಬರಲಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.
ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಕ್ರಿಶ್ಚಿಯನ್ ಸಂಖ್ಯೆಯಲ್ಲಿರುವ ದಕ್ಷಿಣ ಕನ್ನಡದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಹುದ್ದೆ ಸಿಗಬಹುದು ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.
ಈ ಪೈಕಿ ಕಾಂಗ್ರೆಸ್ ನ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿರುವ ಹಾಗೂ ಹಿರಿಯ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿರುವ ನವೀನ್ ಡಿಸೋಜಾ ರವರ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.
ಈ ಬಾರಿಯ ಕೇರಳದ ಚುನಾವಣೆಯಲ್ಲಿ ಸಹ ನವೀನ್ ಡಿಸೋಜ ಕಾರ್ಯನಿರ್ವಹಣೆ ಪಕ್ಷದ ಹೈಕಮಾಂಡ್ ಗಮನ ಸೆಳೆದಿದೆ ಎನ್ನಲಾಗಿದೆ. ಈ ಮೊದಲು ತನಗ ನೀಡಿರುವ ಹಲವಾರು ಜವಾಬ್ದಾರಿಗಳನ್ನು ಎಲ್ಲಿಯೂ ಪ್ರಚಾರ ಬಯಸದೆ ಚಾಚು ತಪ್ಪದೇ ನಿರ್ವಹಿಸಿದ ಕೀರ್ತಿ ನವೀನ್ ಡಿಸೋಜ ರವರಿಗೆ ಇದೆ. ಈ ಎಲ್ಲಾ ಅಂಶಗಳ ಆಧಾರದ ಮೇಲೆ ಈ ಬಾರಿ ಅವರನ್ನು ರಾಜ್ಯಸಭೆ ಕಳಿಸುವ ಬಗ್ಗೆ ಪಕ್ಷದ ಉನ್ನತ ಮೂಲಗಳು ಗಂಭೀರ ಚಿಂತನೆಯಲ್ಲಿದೆ ಎಂದು ತಿಳಿದು ಬಂದಿದೆ.
ಇನ್ನೊಂದು ಸ್ಥಾನ ಯಾರ ಪಾಲಾಗಲಿದೆ ಎಂಬ ಕುತೂಹಲ ಮನೆ ಮಾಡಿದೆ. ಕಾಂಗ್ರೆಸ್ ತನ್ನ ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಸುಲಭವಾಗಿ ಪಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಕಾಂಗ್ರೆಸ್ನ ಶಾಸಕರಗಳ ಬಲ 3 ರಾಜ್ಯಸಭೆಗೆ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.
ರಾಜ್ಯಸಭಾ ಚುನಾವಣೆ ಜೂನ್ 18ರಂದು ನಡೆಯಲಿದ್ದು, ಜೂನ್ ಎಂಟಕ್ಕೆ ನಾಮಿನೇಷನ್ ಸಲ್ಲಿಸಲು ಅಂತಿಮ ದಿನಾಂಕವಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು