6:33 PM Monday8 - September 2025
ಬ್ರೇಕಿಂಗ್ ನ್ಯೂಸ್
ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5…

ಇತ್ತೀಚಿನ ಸುದ್ದಿ

ನಾವೆಲ್ಲರೂ ಯೋಗದ ಹಾದಿಯಲ್ಲಿ ಸಾಗೋಣ:  ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರಧಾನಿ ಮೋದಿ ಕರೆ

21/06/2022, 15:12

ಮೈಸೂರು(reporterkarnataka.com): ಯೋಗ ದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ನಾನು ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೈಸೂರು ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಯೋಗದ ಹಿನ್ನೆಲೆಯನ್ನು ನೆನೆದು ಹಾಡಿ ಹೊಗಳಿದರು.

ಯೋಗ ಈಗ ಇಡೀ ಜಗತ್ತಿನಲ್ಲಿ ಜನಪ್ರಿಯವಾಗಿದೆ. ಯೋಗ ಎನ್ನುವುದು ಆತ್ಮಪ್ರಕಾಶಕ್ಕೆ ನೆರವಾಗುವ ಪ್ರಕ್ರಿಯೆಯಾಗಿದೆ. ಭಾರತವು ಸದಾ ವಿಶ್ವದ ಒಳಿತು ಬಯಸಿದೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. 

‘ಮಾನವತೆಗೆ ಯೋಗ ಎನ್ನುವುದು’ ಈ ವರ್ಷದ ಘೋಷವಾಕ್ಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ, ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು ಭಾರತೀಯರ ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನ ನಡೆಯುತ್ತಿದೆ. ಇವು ಭಾರತದ ಇತಿಹಾಸಕ್ಕೆ ಸಾಕ್ಷಿ, ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ. ಯೋಗದಿನದ ಪ್ರಯುಕ್ತ ಎಲ್ಲರನ್ನೂ ಬೆಸೆಯುತ್ತಿದ್ದೇವೆ. ಯೋಗದ ಬಗ್ಗೆ ತಿಳಿಯೋಣ, ಯೋಗದ ರೀತಿಯಲ್ಲಿ ಬದುಕೋಣ, ಯೋಗವನ್ನು ನಮ್ಮದಾಗಿಸಿಕೊಳ್ಳೋಣ. ನಾವು ಯೋಗದ ರೀತಿಯಲ್ಲಿ ಜೀವನ ಮುಂದುವರಿಸೋಣ. ಯೋಗದಿಂದ ಸಿಗುವ ನೆಮ್ಮದಿಯನ್ನು ಎಲ್ಲರೂ ಸಂಭ್ರಮಿಸೋಣ. ಯೋಗದಿಂದ ನಾವು ಎಲ್ಲರೂ ಬೆಸೆದುಕೊಳ್ಳಲು ದೊಡ್ಡ ಅವಕಾಶ ಸಿಕ್ಕಿದೆ. ಈಗ ಯುವಕರು ಹೊಸಹೊಸ ಆಲೋಚನೆಗಳೊಂದಿಗೆ ಯೋಗದ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಸ್ಟಾರ್ಟ್ಅಪ್ ಅವಕಾಶಗಳೂ ಸಾಕಷ್ಟು ಇವೆ. ಮೈಸೂರಿನಲ್ಲಿ ಈಗ ಇನ್ನೊವೇಟಿವ್ ಡಿಜಿಟಲ್ ಎಕ್ಸಿಬಿಷನ್ ಆಯೋಜಿಸಿದ್ದೇವೆ ಎಂದು ಮೋದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು