6:17 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ನವೆಂಬರ್ 1ರಂದು ನಮ್ಮ ಕುಡ್ಲ ವಾಹಿನಿಯಿಂದ ಗೂಡುದೀಪ ಪಂಥ 2021: ಗೆದ್ದವರಿಗೆ ಚಿನ್ನದ ಪದಕ, ಸಾಧಕರಿಗೆ ಪ್ರಶಸ್ತಿ

30/10/2021, 21:43

ಮಂಗಳೂರು(reporterkarnataka.com) : ದೀಪಾವಳಿ ಹಬ್ಬದ ಪ್ರಯುಕ್ತ ನಮ್ಮ ಕುಡ್ಲ ವಾಹಿನಿಯಿಂದ ನಡೆಸಲಾಗುವ ಗೂಡು ದೀಪ ಪಂಥ ನವೆಂಬರ್ ೧ ರಂದು ಸಂಜೆ 4 ಗಂಟೆಗೆ ಕುದ್ರೋಳೀ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ. ಸಾಂಪ್ರದಾಯಿಕ, ಆಧುನಿಕ ಹಾಗೂ  ವಿಶೇಷ ಮಾದರಿ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆಯನ್ನ ಏರ್ಪಡಿಸಲಾಗಿದೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಹರೀಶ್  ಬಿ ಕರ್ಕೇರ ಈ ವಿಷಯ ತಿಳಿಸಿದರು. 

ಪ್ರತಿಯೊಂದು ವಿಭಾಗದಲ್ಲೂ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಗೂಡುದೀಪಗಳಿಗೆ ಚಿನ್ನದ ಪದಕವನ್ನು ಹಾಗೂ ತೃತೀಯ ಸ್ಥಾನ ಪಡೆಯುವ ಗೂಡುದೀಪಗಳಿಗೆ ಬೆಳ್ಳಿಯ ಪದಕವನ್ನು ಬಹುಮಾನವಾಗಿ ನೀಡಲಾಗುತ್ತಿದೆ. ನೂರಕ್ಕಿಂತಲೂ ಹೆಚ್ಚು ಮೆಚ್ಚುಗೆ ಪಡೆದ ಸ್ಪರ್ಧಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳ ಜೊತೆಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಗುತ್ತೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ತುಳುನಾಡಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕೂಡಾ ನಡೆಯಲಿದೆ. ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯರನ್ನು ಗುರುತಿಸಿ ‘ನಮ್ಮ ತುಳುವೆರ್” ಎಂಬ ಪ್ರಶಸ್ತಿ ಜೊತೆಗೆ ಬೇರೆ ಬೇರೆ ವಿಭಾಗಗಳಲ್ಲಿ ಸಾಧನೆಗೈದ ಸಾಧಕರಿಗೆ ನಮ್ಮ ಕುಡ್ಲ ಪ್ರಶಸ್ತಿ ಮತ್ತು ಬಿ.ಪಿ. ಕರ್ಕೇರ ವಿಶೇಷ ಪ್ರಶಸ್ತಿ ಹಾಗೂ ಬಾಲ ಪ್ರತಿಭೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತೆ ಎಂದರು.

 ಗೋಲ್ಡ್ ಫಿಂಚ್ ಹೊಟೇಲ್ ಮಾಲಕ 

ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರಿಗೆ ‘ನಮ್ಮ ತುಳುವೆರ್ ಪ್ರಶಸ್ತಿ, ಶೆಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸಂಸ್ಥೆಯ ಮಾಲೀಕ, ಗೋವಿಂದ ಬಾಬು ಪೂಜಾರಿ ಹಾಗೂ ಬೋಳಿಯಾರ್ ಕುಂಟಾಲಗಿರಿಯ ಕದಂಬವನದ ರೂವಾರಿ ಮಾಧವ ಉಳ್ಳಾಲ ಅವರಿಗೆ “ನಮ್ಮ ಕುಡ್ಲ” ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

40 ವರ್ಷಗಳಿಂದ ಭೂತರಾಧನೆಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ತುಳುವ ಸಿರಿ ಬಿರುದಾಂಕಿತ ದೇಜಪ್ಪ ಬಾಚಕೆರೆ ಅವರಿಗೆ ನಮ್ಮ ಕುಡ್ಲ-ಜಾನಪದ ಪ್ರಶಸ್ತಿ 2021 ನೀಡಲಾಗುತ್ತದೆ. ಉಡುಪಿ ಜಿಲ್ಲೆ ಕೊಡಂಕೂರಿನ ಪ್ರಸಿದ್ಧ ನಾಟಿ ವೈದ್ಯ ಶ್ರೀನಿವಾಸ ಪೂಜಾರಿ ಅವರಿಗೆ “ ನಮ್ಮ ಕುಡ್ಲ ನಾಟಿ ವೈದ್ಯ ಪ್ರಶಸ್ತಿ”, ವಿವೇಕ್ ರಾಜ್ ಪೂಜಾರಿ ಅವರಿಗೆ “ನಮ್ಮ ಕುಡ್ಲ ಯುವ ಉದ್ಯಮಿ ಪ್ರಶಸ್ತಿ”. ಹಾಗೂ ವಿಶ್ವ ಹಿಂದೂ ಪರಿಷದ್ ಭಜರಂಗದಳಕ್ಕೆ “ಬಿ.ಪಿ. ಕರ್ಕೇರ ಸೇವಾ ಪ್ರಶಸ್ತಿ” ಯನ್ನು ಈ ಬಾರಿ ಕೊಟ್ಟು ಗೌರವಿಸಲಾಗುವುದು ಎಂದು ತಿಳಿಸಿದರು

ಈ ಸಂದರ್ಭ ನಿರ್ದೇಶಕರಾದ ಸುರೇಶ್ ಬಿ. ಕರ್ಕೇರ, ಮೋಹನ್ ಬಿ. ಕರ್ಕೇರ, ಲೀಲಾಕ್ಷ ಬಿ. ಕರ್ಕೇರ, ನಮ್ಮ ಕುಡ್ಲ ಸಂಸ್ಥೆಯ ಸಿಒಒ ಕದ್ರಿ ನವನೀತ ಶೆಟ್ಟಿ, ಹಾಗೂ ದಯಾನಂದ ಕಟೀಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು