10:56 PM Sunday6 - July 2025
ಬ್ರೇಕಿಂಗ್ ನ್ಯೂಸ್
ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನಕ್ಸಲ್ ಜತೆ ಸಂಬಂಧ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ; ನ್ಯಾಯಾಲಯ ತೀರ್ಪು: 9 ವರ್ಷಗಳ ಸುದೀರ್ಘ ಕಾನೂನು ಹೋರಾಟ

21/10/2021, 16:02

ಮಂಗಳೂರು(reporterkarnataka.com): ನಕ್ಸಲ್ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಸುಮಾರು 4 ತಿಂಗಳು ಬಂಧನದಲ್ಲಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡಿರುವ

ವಿಠಲ ಮಲೆಕುಡಿಯ ಅವರನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ. 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಗುರುವಾರ ಈ ಕುರಿತು ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕಿನ ಕತ್ಲೂರು ಗ್ರಾಮ ವಿಠಲ ಮಲೆಕುಡಿಯ ಅವರನ್ನು ನಕ್ಸಲರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2012 ಮಾರ್ಚ್ ತಿಂಗಳಲ್ಲಿ ಬಂಧಿಸಲಾಗಿತ್ತು. ವಿಠಲ ಜತೆ ಅವರ ತಂದೆ ಅವರನ್ನು ಕೂಡ ದಸ್ತಗಿರಿ ಮಾಡಲಾಗಿತ್ತು. ಸುಮಾರು 4 ತಿಂಗಳು ಸೆರೆಮನೆ ವಾಸ ಅನುಭವಿಸಿದ ಜನರ್ಲಿಸಂ ವಿದ್ಯಾರ್ಥಿಯಾದ ವಿಠಲ ಮಲೆಕುಡಿಯ ಅವರು ನಂತರ ಜಾಮೀನು ಮೇಲೆ ಬಿಡುಗಡೆಗೊಂಡಿದ್ದರು. ಅಂದಿನ ಸರಕಾರ ವಿಠಲ ಮಲೆಕುಡಿಯ ಅವರ ಮೇಲೆ ಸಾಕಷ್ಟು ಸಾಕ್ಷ್ಮಾಧಾರ ಇಲ್ಲದ ಹಿನ್ನೆಲೆಯಲ್ಲಿ ಪ್ರಕರಣ ಕೈಬಿಡುವುದಾಗಿ ಹೇಳಿತ್ತು. ಈ ನಡುವೆ ಬೆಳ್ತಂಗಡಿ ಪೊಲೀಸರು ವಿಠಲ ಮಲೆಕುಡಿಯ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. 2012ರಿಂದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.

ವಿಠಲ ಮಲೆಕುಡಿಯ ಅವರ ಕತ್ಲೂರು ಮನೆಯಲ್ಲಿ ದೊರಕಿದ 21 ಸಾವಿರ ರೂ. ನಗದನ್ನು ನಕ್ಸಲ್ ಚಟುವಟಿಕೆಗಾಗಿ ಗ್ರಾಮಸ್ಥರಿಂದ ಸಂಗ್ರಹಿಸಿದ ಹಣ ಎಂದು ಪೊಲೀಸರು ಆರೋಪಿಸಿದ್ದರು. ಆದರೆ

ವಿಠಲ ಮಲೆಕುಡಿಯ ಅವರು ಇದು ತನ್ನ ತಂದೆ – ತಾಯಿ ದುಡಿದ ಹಣ. ಅಪ್ಪ ಅಮ್ಮನಿಗೆ ಬ್ಯಾಂಕ್ ಖಾತೆ ಇಲ್ಲದಿರುವುದರಿಂದ ಮನೆಯಲ್ಲೇ ಉಳಿತಾಯ ಮಾಡಿ ಕೂಡಿಟ್ಟ ಹಣ ಎಂದು ಸ್ಪಷ್ಟನೆ ನೀಡಿದ್ದರು. ನಂತರ ವಿಠಲ ಅವರು ಗ್ರಾಮ ಪಂಚಾಯಿತಿ ಚುನಾವಣೆಗೂ ಸ್ಪರ್ಧಿಸಿದ್ದರು. ನಾರಾವಿ ಗ್ರಾಮ ಪಂಚಾಯಿತಿಯ 2ನೇ ವಾರ್ಡ್ ನಿಂದ ಸ್ಪರ್ಧಿಸಿದ್ದರು.

ಇದೀಗ ಪ್ರಕರಣ ವಿಚಾರಣೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೂರ್ಣಗೊಂಡಿದ್ದು, ಇಂದು ತೀರ್ಪು ಹೊರಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು