ಇತ್ತೀಚಿನ ಸುದ್ದಿ
ನಾಯಕತ್ವ ವಿಚಾರ: ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಲ್ ಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
24/05/2023, 21:00
ನಿವೇದಿತಾ ರಮೇಶ್ ಬೆಂಗಳೂರು
info.reporterkarnataka@gmail.com
ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಬಹಿರಂಗ ಹೇಳಿಕೆ ನೀಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನಾಲ್ಕೈದು ದಿನಗಳು ಅಷ್ಟೇ ಆಗಿವೆ. ಆಗಲೇ ಅನಗತ್ಯವಾಗಿ ವಿವಾದ ಸೃಷ್ಠಿಸುವ ಹೇಳಿಕೆಗಳು ಬೇಡ. ಅದರಲ್ಲೂ ನಾಯಕತ್ವಕ್ಕೆ ಸಂಬಂಧಿಸಿದಂತೆ,ಅಧಿಕಾರ ಹಂಚಿಕೆಗೆ ಸಂಬಂಧಿಸಿದ ಹೇಳಿಕೆಗಳನ್ನು ಯಾರೂ ನೀಡಬಾರದು ಎಂಬ ಖಡಕ್ ಸೂಚನೆಯನ್ನು ಮುಖ್ಯಮಂತ್ರಿ ನೀಡಿದರು.
ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಎಂಬ ಹೇಳಿಕೆ ನೀಡುವ ಮೂಲಕ ಸಚಿವ ಎಂ.ಬಿ. ಪಾಟೀಲ್ ವಿವಾದ ಎಬ್ಬಿಸಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣ ಎಚ್ಚೆತ್ತಿರುವ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಲಕ ಎಲ್ಲ ಶಾಸಕರಿಗೂ ವಿವಾದಾತ್ಮಕ ಹೇಳಿಕೆ ನೀಡದಂತೆ ಸಂದೇಶ ನೀಡಿದೆ.