1:32 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಭರ್ತಿಗೆ ಅಗತ್ಯ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

12/03/2025, 23:54

ಬೆಂಗಳೂರು(reporterkarnataka.com): ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಖಾಲಿ ಇರುವ 247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಕುಣಿಗಲ್ ಕ್ಷೇತ್ರದ ಸದಸ್ಯ ಡಾ. ಹೆಚ್.ಡಿ.ರಂಗನಾಥ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಈಗಾಗಲೇ 14-03-2024ರಂದು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕರ್ನಾಟಕ ಲೋಕ ಸೇವಾ ಆಯೋಗದಿಂದ 15-3-2024ರಂದು ಅಧಿಸೂಚನೆ ಪ್ರಕಟಿಸಲಾಗಿದೆ.
ದಿನಾಂಕ: 16-11-2024 ಮತ್ತು 17-01-2024ರಂದು ಕಲ್ಯಾಣ ಕರ್ನಾಟಕ ವೃಂದದ 97 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಉಳಿಕೆ ಮೂಲ ವೃಂದದ 150 ಹುದ್ದೆಗಳಿಗೆ ದಿನಾಂಕ: 07-12-2024 ಮತ್ತು 08-12-2024ರಂದು ಪರೀಕ್ಷೆ ನಡೆಸಲಾಗಿರುತ್ತದೆ.
ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಿದ್ದು ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು