ಇತ್ತೀಚಿನ ಸುದ್ದಿ
ದ. ಕ. ಜಿಲ್ಲೆಯ ಉದ್ಯೋಗಕಾಂಕ್ಷಿಗಳಿಗೆ ನೌಕರಿ ಕಲ್ಪಿಸಲು ಅಗತ್ಯ ಕ್ರಮ: ಡಾ. ಭರತ್ ಶೆಟ್ಟಿ ಪ್ರಶ್ನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರ
11/03/2025, 01:08

ಬೆಂಗಳೂರು (reporterkarnataka.com):ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಶೀಘ್ರದಲ್ಲಿಯೇ ಕೈಗೊಂಡು ಉದ್ಯೋಗ ಕಲ್ಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಇಂದು ವಿಧಾನಸಭೆಯ ಅಧಿವೇಶನದಲ್ಲಿಂದು ಸದಸ್ಯರಾದ ಡಾ.ಭರತ್ ಶೆಟ್ಟಿ ವೈ. ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಪ್ರಸ್ತಾಪಿಸಿದಾಗ, ಈ ವಿಷಯದ ಕುರಿತು ಉಪಮುಖ್ಯಮಂತ್ರಿಗಳು ಉತ್ತರಿಸಿದರು.