5:16 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ನೀಲಗಿರಿ : ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ ; ಇಬ್ಬರ ಸಾವು, ಸೇನಾ ಮುಖ್ಯಸ್ಥರು ಹಾಗೂ ಅವರ ಕುಟುಂಬಸ್ತರು ಪಾರು

08/12/2021, 14:48

ಚೆನ್ನೈ: ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17 ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ಕಡೆಗೆ ಹೊರಟಿತ್ತು. ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸಂಭವನೀಯ ಸಾವು ನೋವುಗಳು ಅಥವಾ ಗಾಯಗಳ ಬಗ್ಗೆ ತಕ್ಷಣದ ಮಾಹಿತಿ ಇಲ್ಲ. ಹೆಲಿಕಾಪ್ಟರ್ ನಲ್ಲಿ ಭಾರತೀಯ ಸೇನೆಯ ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಸೇರಿದಂತೆ ಉನ್ನತ ಅಧಿಕಾರಿಗಳು ಇದ್ದರು ಎಂದು ತಿಳಿದುಬಂದಿದೆ.

ಬಿಪಿನ್ ರಾವತ್ ಹಾಗೂ ಅವರ ಕುಟುಂಬಸ್ತರು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು