8:18 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನೀರುಮಾರ್ಗ | ಆತ್ಮಶಕ್ತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ

10/08/2026, 19:46

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ ನಡೆಯಿತು.
ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ, ಸುಬ್ರಹ್ಮಣ್ಯ ನಗರ, ನೀರುಮಾರ್ಗ ಇದರ ಜಂಟಿ ಆಶ್ರಯದೊಂದಿಗೆ ಮಂಗಳೂರಿನ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ, ಮಂಗಳ ಕಿಡ್ನಿ ಫೌಂಡೇಶನ್ ನ ವೈದ್ಯರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ ಜರುಗಿತು.
ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇದರ ಗೌರವ ಅಧ್ಯಕ್ಷ ಶ್ರೀ ಲಕ್ಷ್ಮಣ ಪೂಜಾರಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈ ವೈದ್ಯಕೀಯ ಶಿಬಿರವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 113ನೇ ಉಚಿತ ಶಿಬಿರವಾಗಿದೆ. ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಸಂಘವು ಮಾಡುತ್ತಿರುವ ಇಂತಹ ಕೆಲಸಗಳು ಶ್ಲಾಘನೀಯ. ಜನರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.
ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇದರ ಅಧ್ಯಕರಾದ ರಾಮನಾಥ್ ಗಡಿಯಾರ್ ಅವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಜೊತೆಯಲ್ಲಿ ಲಯನ್ ಕ್ಲಬ್ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದ್ದು, ಶಿಬಿರಾರ್ಥಿಗಳು ಉತ್ತಮ ಸ್ಪಂದನೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ನಡೆಸುವಂತಾಗಲಿ ಎಂದರು.
ಮಂಗಳ ಕಾಲೇಜಿನ ಉಪನ್ಯಾಸಕಿ ವಿಜೇತಾ ಶೆಟ್ಟಿ ಅವರು ಮಾತನಾಡಿ ಆರೋಗ್ಯದ ಕಾಳಜಿ ಹಾಗೂ ಶಿಬಿರದಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 14 ವರ್ಷಗಳಿಂದ ನಿರಂತರವಾಗಿ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಘದ ಸದಸ್ಯರ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದ್ದು, ಇದು ಸಂಘದ ವತಿಯಿಂದ ಆಯೋಜಿಸಿದ 113ನೇ ಉಚಿತ ವೈದ್ಯಕೀಯ ಶಿಬಿರ ಇದಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಸಾಮಾಜಿಕ ಬದ್ಧತೆಯೊಂದಿಗೆ ನೀರುಮಾರ್ಗ ಪರಿಸರದಲ್ಲಿ ಈಗಾಗಲೇ ಆರ್ಥಿಕವಾಗಿ ಹಿಂದುಳಿದ ಸದಸ್ಯರ ಮನೆಯ ನವೀಕರಣವನ್ನು ಮಾಡಿದೆ. ವಾಹನ ವಿಮೆ, ಆರೋಗ್ಯ ವಿಮೆಯನ್ನು ವಿವಿಧ ವಿಮಾ ಕಂಪೆನಿಗಳ ಸೌಲಭ್ಯ ಸಹಯೋಗದೊಂದಿಗೆ ಆಕರ್ಷಕ ಪ್ರೀಮಿಯಂನಲ್ಲಿ ನೀಡುತ್ತಿದ್ದು, ಗ್ರಾಹಕರಿಗೆ ಆರೋಗ್ಯ ವಿಮೆಯ ಮಹತ್ವ ತಿಳಿಸಿದರು.
ಮುಂದಿನ ದಿನಗಳಲ್ಲಿ ಎಲ್ಲ ಸದಸ್ಯರಿಗೆ ಆರೋಗ್ಯ ವಿಮೆಯನ್ನು ಕೊಡುವ ಯೋಜನೆಯನ್ನು ಹಾಕಿಕೊಂಡಿದ್ದೇವೆ ಎಂದರು.
ಈ ವೈದ್ಯಕೀಯ ಶಿಬಿರದಲ್ಲಿ ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಾಡುವ ಪ್ರಥಮ ಚಿಕಿತ್ಸೆ (ಸಿ. ಪಿ.ಆರ್) ಬಗ್ಗೆ ಪ್ರಾತ್ಯಕ್ಷಿಕೆ ಯನ್ನು ಮಂಗಳ ಆಸ್ಪತ್ರೆಯ ವೈದ್ಯ ತಂಡದವರು ನೀಡಿದರು.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಗೋಪಾಲ ಎಂ., ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇದರ ನಿಕಟಪೂರ್ವ ಅಧ್ಯಕ್ಷರಾದ ಲಯನ್ ನರಸಿಂಹ ಪೈ, ನಿಕಟಪೂರ್ವ ವಲಯ ಅಧ್ಯಕರಾದ ಲಯನ್ ಶೀನಾ ಪೂಜಾರಿ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ, ಇದರ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇದರ ಅಧ್ಯಕ್ಷರಾದ ಶ್ರೀ ನಾರಾಯಣ ಪೂಜಾರಿ, ಕಾರ್ಯದರ್ಶಿಯಾದ ಶ್ರೀ ಸತೀಶ ಪೂಜಾರಿ, ಮಂಗಳ ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ವಿಜೇಶ್ ಮೊದಲಾದವರು ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್ ಸ್ವಾಗತಿಸಿದರು. ಪ್ರಭಾರ ಶಾಖಾಧಿಕಾರಿಯಾದ ಶ್ರೀ ವರುಣರಾಜ್ ನಿರೂಪಿಸಿದರು. ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು