6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ನೀಟ್ ಪರೀಕ್ಷೆ ಹಗರಣ: ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್, ಎನ್ ಎಸ್ ಯುಐ ಬೃಹತ್ ಪ್ರತಿಭಟನೆ

03/07/2024, 13:56

ಮಂಗಳೂರು(reporterkarnataka.com): ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಂಟಿ‌ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಅವ್ಯವಸ್ಥೆಯಿಂದ ನೀಟ್ (NEET )ಪರೀಕ್ಷೆಯಲ್ಲಿ ನಡೆದ ಹಗರಣವನ್ನು ಖಂಡಿಸಿ ಹಾಗೂ ಮರು ನೀಟ್ ಪರೀಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಂಗಳೂರು ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಬಿ‌. ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ,ಕೆಪಿಸಿಸಿ ವಕ್ತಾರ ಎಂ.ಜಿ. ಹೆಗಡೆ ಮಾತನಾಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗಿರೀಶ್ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶಾಹುಲ್ ಹಮೀದ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶ್ವಾಸ್ ದಾಸ್, ಮನಪಾ ವಿರೋಧ ಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಎನ್ ಎಸ್ ಯುಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ, ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಿರಾಜ್ ಗುದುರು ಹಾಗೂ NSUI ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು