5:20 AM Thursday28 - November 2024
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ…

ಇತ್ತೀಚಿನ ಸುದ್ದಿ

ನೀಟ್: ಫೆ. 4ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

31/01/2022, 14:21

ಬೆಂಗಳೂರು(reporterkarnataka.com): 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ `ನೀಟ್’ ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದೆ.

ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಬಗ್ಗೆ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, `ಫೆ.4ರಂದು ಈ ಮೂರೂ ಕೋರ್ಸುಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗುವುದು. ಇದಕ್ಕೂ ಮೊದಲು ಫೆ.1ರ ಬೆಳಗ್ಗೆ 10 ಗಂಟೆಯ ವರೆಗೆ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಫೆ.1ರಿಂದ 3ರ ಬೆಳಗ್ಗೆ 10 ಗಂಟೆಯ ವರೆಗೆ ತಮ್ಮ ಐಚ್ಛಿಕ ವಿಷಯಗಳಲ್ಲಿ ಅಗತ್ಯವೆನಿಸಿದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ’ ಎಂದು ಹೇಳಿದೆ.

ಬಳಿಕ ಚಾಯ್ಸ್-1 ಮತ್ತು ಚಾಯ್ಸ್-2 ಸ್ತರದ ವಿದ್ಯಾರ್ಥಿಗಳು ನಿಗದಿತ ಶುಲ್ಕ ತುಂಬಿ, ಪ್ರವೇಶ ದಾಖಲಾತಿಯನ್ನು ಡೌನ್-ಲೋಡ್ ಮಾಡಿಕೊಳ್ಳಲು ಫೆ.4ರ ಮಧ್ಯಾಹ್ನ 2 ಗಂಟೆಯಿಂದ ಫೆ.7ರ ಮಧ್ಯಾಹ್ನ 1 ಗಂಟೆಯ ವರೆಗೆ ಅವಕಾಶವಿರುತ್ತದೆ. ನಂತರ, ವಿದ್ಯಾರ್ಥಿಗಳು ಒಂದು ಸೆಟ್ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ಮೂಲ ದಾಖಲೆಗಳನ್ನು ಫೆ.5ರಿಂದ 7ರ ಒಳಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಸಲ್ಲಿಸಬೇಕು ಎಂದು ಪ್ರಕಟಣೆ ವಿವರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು