8:09 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಪತ್ತೆ

09/09/2022, 19:19

ಕುಂದಾಪುರ(reporterkarnataka.com): ನೀಟ್ ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂತೆಂದು ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಬೈಂದೂರು ತಾಲೂಕಿನ ನಾವುಂದ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್‌ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ ಅವರ ಪುತ್ರ ಸಾಯೀಶ್ ಶೆಟ್ಟಿ (18) ಮೃತಪಟ್ಟ ವಿದ್ಯಾರ್ಥಿ.

ಕಲಿಕೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದ್ದ ಸಾಯೀಶ್ ಈ ಬಾರಿಯ ನೀಟ್ ಪರೀಕ್ಷೆ ಬರೆದಿದ್ದರು. ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಅವರು ನೀಟ್ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಬೆಳಗ್ಗೆ ಸೈಬರ್‌ ಕೇಂದ್ರಕ್ಕೆ ತೆರಳಿ ಫಲಿತಾಂಶ ನೋಡಿದ್ದಾರೆ ಎನ್ನಲಾಗುತ್ತಿದೆ. ಪರೀಕ್ಷೆಯಲ್ಲಿ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂದು ಬೇಸರಗೊಂಡಿದ್ದ ಅವರು ಇದೇ ಕಾರಣಕ್ಕೆ ಗುರುವಾರ ಮಧ್ಯಾಹ್ನ 11.30ರ ವೇಳೆ ಸಂಗಮ್ ಸೇತುವೆಯ ಮೇಲಿನಿಂದ ಪಂಚಗಂಗಾವಳಿ ನದಿಗೆ ಹಾರಿದ್ದಾರೆನ್ನಲಾಗಿದೆ.

ಶಿವಮೊಗ್ಗದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸದ ಮುಗಿಸಿದ್ದ ಸಾಯೀಶ್ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರೆನ್ನಲಾಗಿದೆ. ನದಿಗೆ ಹಾರಿದ ವಿಷಯ ತಿಳಿಯುತ್ತಲೇ ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು, ಮುಳುಗು ತಜ್ಞರು ಸಾಯೀಶ್ ರಿಗಾಗಿ ಶೋಧ ನಡೆಸಿದ್ದರೂ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದರಿಂದ ಪತ್ತೆ ಸಾಧ್ಯವಾಗಿರಲಿಲ್ಲ. ಇಂದು ಬೆಳಗ್ಗೆ ಬೈಂದೂರು ತಾಲೂಕಿನ ನಾವುಂದ ಸಮುದ್ರ ತೀರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು