5:00 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ನೀಟ್‌ ಸೀಟು; ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ: ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಎಚ್ಚರಿಕೆ

17/06/2025, 18:42

*ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಎಲ್ಲವೂ ಸುವ್ಯವಸ್ಥೆಯಿಂದ ಸಾಗುತ್ತದೆ: ಸಚಿವರ ಸ್ಪಷ್ಟನೆ*


ಬೆಂಗಳೂರು(reporterkarnataka.com):
ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದರು.
ವೈದ್ಯಕೀಯ ಸೀಟು ಕೊಡಿಸುತ್ತೀವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು.
ನೀಟ್‌ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥಿಗಳು ಹಾಜರಾಗಿದ್ದರು, ಈ ಪೈಕಿ 83,582 ಅರ್ಹತೆ ಪಡೆದುಕೊಂಡಿದ್ದಾರೆ.
ಹೇಗಾದರೂ ಮಾಡಿ ಒಳ್ಳೆ ಕಾಲೇಜಿನಲ್ಲಿ ಸೀಟು ಪಡೆಯಬೇಕು ಎಂಬ ಆತುರಕ್ಕೆ ಬರಬೇಡಿ. ನಿಮ್ಮ ಆತಂಕವನ್ನು ದುರುಪಯೋಗಪಡಿಸಿಕೊಳ್ಳಲು ಮಧ್ಯವರ್ತಿಗಳು ಕಾದಿರುತ್ತಾರೆ. ಅವರ ಮೋಸದ ಜಾಲಕ್ಕೆ ಬೀಳಬೇಡಿ ಎಂದು ಸಚಿವರು ಸಲಹೆ ನೀಡಿದ್ದಾರೆ.

*ಕೆಇಎಯಿಂದ ಸೀಟು ಹಂಚಿಕೆ:*
ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದಲೇ ಸೀಟುಗಳ ಹಂಚಿಕೆ ಕ್ರಮಬದ್ಧವಾಗಿ ಆಗುತ್ತದೆ. ಅದರಂತೆ ನಿಯಮಗಳನ್ನು ಪಾಲಿಸಿ. ವಿದ್ಯಾರ್ಥಿಗಳು ಮತ್ತು ಪೋಷಕರು ಇದನ್ನು ತಪ್ಪದೇ ತಿಳಿದುಕೊಳ್ಳಬೇಉ ಎಂದು ಸಚಿವರು ವಿವರಿಸಿದ್ದಾರೆ.
ಅತ್ಯುತ್ತಮ ಸಾಧನೆ ಮಾಡಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ, ಎಲ್ಲ ವಿದ್ಯಾರ್ಥಿಗಳ ಭವಿಷ್ಯವೂ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

*ದಲ್ಲಾಳಿಗಳಿಗೆ ಎಚ್ಚರಿಕೆ:*
ಸೀಟು ಕೊಡಿಸುತ್ತೇನೆಂದು ವಿದ್ಯಾರ್ಥಿಗಳು ಅಥವಾ ಪೋಷಕರನ್ನು ದಿಕ್ಕು ತಪ್ಪಿಸಿ ಮೋಸ ಮಾಡಿದವರು ಕಂಡುಬಂದರೆ, ಅಂಥ ದಲ್ಲಾಳಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ. ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು