6:39 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನೀವು ಕಿರು ಆಹಾರ ಸಂಸ್ಕರಣೆ ಉದ್ದಿಮೆದಾರರೇ?  ಉದ್ದಿಮೆ ವಿಸ್ತರಣೆ ಬಯಸುವಿರಾ?  ಹಾಗಾದರೆ ಸಿಗಲಿದೆ ನಿಮಗೆ ಸರಕಾರದ ಸಹಾಯಧನ !

31/07/2021, 07:28

ಮಂಗಳೂರು (reporterkarnataka.com): ಕಿರು ಆಹಾರ ಸಂಸ್ಕರಣೆ ಉದ್ದಿಮೆ ಸ್ಥಾಪಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವವರ ಉದ್ದಿಮೆಗಳನ್ನು ವಿಸ್ತರಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ.
ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಈ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬಳಸಿಕೊಂಡು ಉದ್ದಿಮೆ ನಿರ್ವಹಿಸುತ್ತಿರುವ ಗೇರು ಸಂಸ್ಕರಣೆ, ತೆಂಗಿನ ಎಣ್ಣೆಯ ಮಿಲ್‍ಗಳು, ಉಪ್ಪಿನಕಾಯಿ ತಯಾರಿ ಘಟಕ, ಜ್ಯೂಸ್ ತಯಾರಿ ಘಟಕ, ಸಾಂಬಾರು ಪುಡಿ ತಯಾರಿ ಘಟಕ, ಹಲಸಿನ ಹಪ್ಪಳ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ, ಬಾಳೆಕಾಯಿ ಚಿಪ್ಸ್ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ ಇತ್ಯಾದಿ ಘಟಕಗಳಿಗೆ ಈ ಯೋಜನೆಯಲ್ಲಿರುವ ವಿಪುಲ ಅವಕಾಶಗಳ ಕುರಿತು ಮಾಹಿತಿ ಶಿಬಿರ ಹಾಗೂ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಉದ್ದಿಮೆದಾರರಿಗೆ ಅಗತ್ಯ ಸಂಪನ್ಮೂಲ ಮಾಹಿತಿ ಹಾಗೂ ಯೋಜನಾ ವರದಿ ತಯಾರಿಗೆ ನೆರವು ನೀಡಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು