8:04 AM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ನೇಜಾರಿನ ಒಂದೇ ಕುಟುಂಬದ 4 ಮಂದಿ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರಿಗೆ ನಗದು ಬಹುಮಾನ: 41 ಮಂದಿ ಸಿಬ್ಬಂದಿಗಳಿಗೆ 1.42 ಲಕ್ಷ

12/12/2023, 17:42

ಉಡುಪಿ(reporterkarnataka.com): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನೇಜಾರಿನ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಬೇಧಿಸಿದ ಪೊಲೀಸರಿಗೆ 1.42 ಲಕ್ಷ ರೂಪಾಯಿ ನಗದು ಬಹುಮಾನವನ್ನು ಮಂಜೂರು ಮಾಡಲಾಗಿದೆ.
ಪ್ರಕರಣದ ಆರೋಪಿ ಪ್ರವೀಣ್ ಚೌಗುಳೆಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಶ್ರಮಿಸಿದ ಉಡುಪಿ, ಮಂಗಳೂರು ಹಾಗೂ ಬೆಳಗಾವಿಯ ಒಟ್ಟು 41 ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ 1,42,500 ರೂಪಾಯಿಯನ್ನು ಬಹುಮಾನವಾಗಿ ಐಜಿಪಿ ಚಂದ್ರಗುಪ್ತ ಅವರ ಶಿಫಾರಸ್ಸಿನಂತೆ ಡಿಜಿಪಿ ಅಲೋಕ್ ಮೋಹನ್ ಅವರು ಮಂಜೂರು ಮಾಡಿದ್ದಾರೆ. ಆರೋಪಿಯ ಚಹರೆ ಪತ್ತೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಈ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತಿದ್ದು ಪ್ರಸ್ತುತ ಆಂತರಿಕ ಭದ್ರತೆ ಇಲಾಖೆಯಲ್ಲಿ ಕರ್ತವ್ಯದಲ್ಲಿರುವ ಎಎಸ್ ಐ ಗೋಪಾಲಕೃಷ್ಣ ಅವರಿಗೆ 2500 ರೂಪಾಯಿ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು