12:19 PM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ನೆಲ್ಯಾಡಿ: ರಾಷ್ಟ್ರೀಯ ಐಕ್ಯತಾ ಸಪ್ತಾಹ; ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ ಉಪನ್ಯಾಸ

02/12/2022, 18:44

ನೆಲ್ಯಾಡಿ(reporterkarnataka.com):
ವಿಶ್ವವಿದ್ಯಾನಿಲಯ ಘಟಕ ಕಾಲೇಜು, ನೆಲ್ಯಾಡಿಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಡಿಯಲ್ಲಿ ‘ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ’ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಅರ್ಥಶಾಸ್ತ್ರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ರಾಯಚೂರಿನ ಮಸ್ಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ರಜಿಯಾ ಎಂ. ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿಯು ಚರ್ಚಿಸಿದಷ್ಟು ಮುಗಿಯದ ಒಂದು ಅಂತರ್ಗತ ವಿಷಯವಾಗಿದೆ. ಪರಿಸರವನ್ನು ಸಂರಕ್ಷಿಸಿ ನಾವು ಆರ್ಥಿಕ ಪ್ರಗತಿಯನ್ನು ಸಾಧಿಸಬೇಕಾಗಿದೆ. ಮಾನವನು ತನ್ನ ಸ್ವಹಿತದ ಸಾಧನೆಗೆ ಪ್ರಕೃತಿಯನ್ನು ಶೋಷಿಸುವುದು ಸರಿಯಲ್ಲ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ನೂರಂದಪ್ಪ ಅವರು ವಹಿಸಿದ್ದರು. ಆರ್ಥಿಕ ಅಭಿವೃದ್ಧಿಯು ಪ್ರಕೃತಿಗೆ ಹಾನಿಕಾರಕವಾಗಬಾರದು, ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಂಡು ಮುಂದಿನ ಪೀಳಿಗೆಗೂ ಕಾಪಾಡಿಕೊಳ್ಳಬೇಕು ಎಂದು ಅವರು ನುಡಿದರು.
ಕಾರ್ಯಕ್ರಮದ ಸಂಚಾಲಕರು ಹಾಗೂ ಅರ್ಥಶಾಸ್ತ್ರ ಸಂಘದ ಸಂಯೋಜಕರಾದ ಶ್ರುತಿ ಸ್ವಾಗತಿಸಿದರು. ಅರ್ಥಶಾಸ್ತ್ರ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಧನ್ಯಶ್ರೀ ಅತಿಥಿಗಳ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸ್ಫೂರ್ತಿ ಕೆ.ಟಿ. ವಂದಿಸಿದರು. ವಿದ್ಯಾರ್ಥಿನಿ ನುಸ್ರಿಲ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ಅರ್ಥಶಾಸ್ತ್ರ ಸಂಘದ ಸಹ ಕಾರ್ಯದರ್ಶಿ ಸಂದೀಪ್ ಕುಮಾರ್ ಬಿ.ಎಂ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು