9:24 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿ.ವಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದಿಂದ ವಿಶೇಷ ಕಾರ್ಯಾಗಾರ

20/03/2022, 22:54

ನೆಲ್ಯಾಡಿ (reporterkarnataka.com):
ನೆಲ್ಯಾಡಿ ವಿ.ವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ರಾಜ್ಯಶಾಸ್ತ್ರದ ಪ್ರಸ್ತುತತೆ ಎಂಬ ವಿಷಯದಲ್ಲಿ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಂಗಳ ಗಂಗೋತ್ರಿ ಕೊಣಾಜೆಯ ರಾಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ದಯಾನಂದ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಪ್ರಸ್ತುತ ವಿದ್ಯಾಮಾನಗಳ ಬಗೆಗೆ ಸಂಶೋಧನಾ ನೆಲೆಯ ಮೌಲ್ಯಾಧಾರಿತ ಗುಣ ಮಟ್ಟದ ಸರ್ವತೋಮುಖ ಅಭಿವೃದ್ಧಿಗೆ ಸಾಧನವಾಗಿರುವ ಆಧುನಿಕತೆಯಿಂದ ಭವಿಷ್ಯತ್ತನ್ನು ರೂಪಿಸಿ ನಡೆಸುವ ಜವಾಬ್ದಾರಿ ಯುವ ಪೀಳಿಗೆಗೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕ ಡಾ.ಜಯರಾಜ್ ವಹಿಸಿದ್ದರು.
ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸುರೇಶ ಪ್ರಾಸ್ತವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಪ್ರಯುಕ್ತ ರಸ ಪ್ರಶ್ನೆ, ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಯನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳಾದ ಧನ್ಯಶ್ರೀ ಸ್ವಾಗತಿಸಿ, ಲೂಕ್ಮಾನ್ ನಿರೂಪಿಸಿ, ವಿಶಾಲ್ ಎನ್.ಟಿ . ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು