4:18 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

17/08/2022, 08:49

ನೆಲ್ಯಾಡಿ(reporterkarnataka.com):
ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಕೆ,ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿತು. ಅಧ್ಯಕ್ಷತೆಯನ್ನು ಡಾ.ಜಯರಾಜ್ ಎನ್.(ಸಂಯೋಜಕರು ವಿ.ವಿ. ಕಾಲೇಜು ನೆಲ್ಯಾಡಿ)  ಅವರ ಅನುಪಸ್ಥಿತಿಯಲ್ಲಿ ಡಾ. ಸೀತಾರಾಮ ಪಿ. (ಸಹ ಸಂಯೋಜಕ ವಿ.ವಿ. ಕಾಲೇಜು ನೆಲ್ಯಾಡಿ) ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ ಮತ್ತು ತರಬೇತುದಾರರಾದ ಮನೋಜ್ ಕೆ.ವಿ. ಭಾಗವಹಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಅನುಭವಗಳನ್ನು ತೆರೆದಿಡುತ್ತಾ, “ಪರಿಶ್ರಮ ಶಿಸ್ತಿನಿಂದ ಹಳ್ಳಿಯಿಂದಲೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗಲು ಸಾಧ್ಯ. ಇದಕ್ಕಾಗಿ ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದರು. 

ಕಾರ್ಯಕ್ರಮದಲ್ಲಿ ಉಷಾ ಅಂಚನ್, (ಅಧ್ಯಕ್ಷರು, ಅನುಷ್ಠಾನ ಸಮಿತಿ, ವಿ.ವಿ. ಕಾಲೇಜು ನೆಲ್ಯಾಡಿ)ಅವರು ಮಾತನಾಡಿ, ಪ್ರತಿಭೆಗಳು ಅವಕಾಶಗಳನ್ನು ಬಳಸಿಕೊಳ್ಳುವುದರೊಂದಿಗೆ ಬೆಳೆಯಲಿ, ಗುರುತಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಪ್ರಾರ್ಥನೆಯ ಮುಖಾಂತರ ಚಾಲನೆ ನೀಡಿದರು. ವೆರೋನಿಕಾ ಪ್ರಭಾ ವಿ. ಪಿ. ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಮನೋಜ್ ಕೆ. ವಿ.  ಅವರ ಪರಿಚಯವನ್ನು ಆನಂದ ಕೆ. ದೈಹಿಕ ನಿರ್ದೇಶಕರು ಮಾಡಿದರು. ಡಾ. ನೂರಂದಪ್ಪ, (ಮುಖ್ಯಸ್ಥರು, ಕನ್ನಡ ವಿಭಾಗ)ವಂದಿಸಿದರು. ದಿವ್ಯಶ್ರೀ ಜಿ, (ವಾಣಿಜ್ಯ ವಿಭಾಗ,) ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು