7:13 AM Monday25 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ನೇಪಾಳ: ಟೇಕಾಫ್ ಹಂತದಲ್ಲೇ ರನ್ ವೇ ಮೇಲೆ ವಿಮಾನ ಪತನ; ಕನಿಷ್ಠ 18 ಮಂದಿ ಸಾವು

24/07/2024, 17:14

ಕಠ್ಮಂಡು(reporterkarnataka.com): ನೇಪಾಳದ ರಾಜಧಾನಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಹಂತದಲ್ಲೇ ಸೌರ್ಯ ಏರ್‌ಲೈನ್ಸ್ ವಿಮಾನವೊಂದು ಪತನಗೊಂಡ ಕಾರಣ ಕನಿಷ್ಢ 18 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

19 ಜನರಿದ್ದ ದೇಶೀಯ ವಿಮಾನವು ಟೇಕಾಫ್ ಆಗಲು ಪ್ರಯತ್ನಿಸುತ್ತಿದ್ದಾಗ ರನ್‌ವೇಗೆ ಅಪ್ಪಳಿಸಿದ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ. ವಿಮಾನಕ್ಕೆ ಬೆಂಕಿ ತಗಲಿದ್ದು, ವಿಮಾನದ ಅವಶೇಷಗಳು ಕಂದಕದ ಮೇಲೆ ಹರಡಿಕೊಂಡಿವೆ.
ಅಪಘಾತದಲ್ಲಿ ವಿಮಾನದ ಪೈಲಟ್ ಬದುಕುಳಿದಿದ್ದು, ಅವರನ್ನು ಚಿಕಿತ್ಸೆಗಾಗಿ ಕಠ್ಮಂಡು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಮಾನವು ಕಠ್ಮಂಡುವಿನಿಂದ ರೆಸಾರ್ಟ್ ಟೌನ್ ಪೊಖರಾಗೆ ತೆರಳಲು ಹೊರಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು